More

    ಸ್ವಾತಂತ್ರ್ಯ ದಿನ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ

    ಶಿಗ್ಗಾಂವಿ: ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದರು.

    ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ತ ಆ. 15ರಂದು ಬೆಳಗ್ಗೆ 8 ಗಂಟೆಗೆ ತಾಲೂಕು ಆಡಳಿತ ಸೌಧ, ಪುರಸಭೆ, ಹಾಗೂ ವಿವಿಧ ತಾಲೂಕು ಆಡಳಿತ ಕಚೇರಿ ಸೇರಿದಂತೆ ವಿವಿಧೆಡೆಗಳಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. ನಂತರ 9 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ. ವಿವಿಧ ಸಮಿತಿಗಳು ವಹಿಸಲಾದ ಜವಾಬ್ದಾರಿಗಳನ್ನು ಚಾಚು ತಪ್ಪದೇ ಕಟ್ಟುನಿಟ್ಟಿನಿಂದ ಗೌರವಯುತವಾಗಿ ಪಾಲಿಸುವ ಜತೆಗೆ ಕರ್ತವ್ಯಲೋಪ, ನಿಯಮ ಉಲ್ಲಂಘನೆಯಾಗದಂತೆ ಹಾಗೂ ಶಿಷ್ಟಾಚಾರ ವ್ಯವಸ್ಥಿತವಾಗಿ ಪಾಲನೆ ಮಾಡಬೇಕು ಎಂದರು.

    ಪಟ್ಟಣದ ಪ್ರಮುಖ ರಸ್ತೆ, ತಾಲೂಕು ಕ್ರೀಡಾಂಗಣದ ಸ್ವಚ್ಛತೆ, ಮಕ್ಕಳಿಗೆ ಅಲ್ಪೋಪಹಾರ, ಕುಡಿಯುವ ನೀರು, ಸಾರ್ವಜನಿಕರಿಗೆ, ಗಣ್ಯರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ವೇದಿಕೆ ನಿರ್ಮಾಣ, ಬೀದಿಗಳಲ್ಲಿ ಅಲಂಕಾರ ಸೇರಿದಂತೆ ಅವಶ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಪಥ ಸಂಚಲನದಲ್ಲಿ ಭಾಗವಹಿಸುವ ಶಾಲಾ ಮಕ್ಕಳ ಸಿದ್ಧತೆ ಮತ್ತು ಪೊಲೀಸ್ ಇಲಾಖೆ, ಕೆಎಸ್‌ಆರ್‌ಪಿ 10ನೇ ಮೀಸಲು ಪೊಲೀಸ್ ಪಡೆಯ ಪಥಸಂಚಲನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜತೆಗೆ ಮಕ್ಕಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಗೊಳಿಸಲು ಪೊಲೀಸ್ ಇಲಾಖೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

    ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ಸಿಪಿಐ ಎಸ್. ಮಾಳಗೊಂಡ, ವಿವಿಧ ಇಲಾಖೆ ಅಧಿಕಾರಿಗಳು, ಕನ್ನಡ ಪರ, ರೈತ ಸಂಘಟನೆಗಳ ಸದಸ್ಯರು ಉಪಸ್ಥಿತರಿರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts