More

    ನಿರಂತರ ಅಧ್ಯಯನ ಮಾಡಲು ಮುಂದಾಗಿ

    ಕಮತಗಿ: ಶಿಕ್ಷಕರು ಸದಾ ಕ್ರಿಯಾಶೀಲರಾಗುವ ಜತೆಗೆ ಸಮಯ ಪ್ರಜ್ಞೆ ರೂಢಿಸಿಕೊಳ್ಳುವುದು ಅತಿ ಅವಶ್ಯಕ ಎಂದು ಕಲಘಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಮಂಜಣ್ಣ ಜಂಗವಾಡ ಹೇಳಿದರು.

    ಪಟ್ಟಣದಲ್ಲಿನ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಯೋಗಿನಿದೇವಿ ಆರ್.ಪಾಟೀಲ ಗ್ರಾಮೀಣ ಮಹಿಳಾ ಶಿಕ್ಷಣ(ಬಿಈಡಿ) ಮಹಾವಿದ್ಯಾಲಯದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಪ್ರಶಿಕ್ಷಣಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಿರಂತರ ಅಧ್ಯಯನಶೀಲರಾಗಿ ಗುಣಮಟ್ಟದ ಬೋಧನೆ ಮಾಡುವ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿ ಆತ್ಮಶಕ್ತಿ ಸದೃಢಗೊಳಿಸುವ ಕಾಯಕ ಮಾಡಬೇಕು ಎಂದರು.

    ಕುಂದರಗಿ ಅಮರಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಒಬ್ಬ ವಿದ್ಯಾರ್ಥಿಯನ್ನು ಸಾಧನೆ ಮಾಡುವ ಮಟ್ಟಕ್ಕೆ ಬೆಳೆಸುವುದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

    ಉಪನ್ಯಾಸಕರು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಆಡಳಿತಾಧಿಕಾರಿ ಅನೀಲಕುಮಾರ ಕಲ್ಯಾಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಕಾರ್ಯದರ್ಶಿ ವಿದ್ಯಾಧರ ಮಳ್ಳಿ, ನಿರ್ದೇಶಕ ಎಂ.ಬಿ.ಶಾಬಾದಿ, ಕಾಲೇಜಿನ ಪ್ರಾಚಾರ್ಯ ಎಸ್.ಎಂ.ರೆಡ್ಡಿ, ಉಪನ್ಯಾಸಕ ಅಶೋಕ ಮಲಘಾಣ, ಎಸ್.ವಿ.ಕಲ್ಮಣಿ, ಎಂ.ಎಂ.ಲಾಯದಗುಂದಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts