More

    ಮಹನೀಯರ ಜಯಂತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ

    ಮದ್ದೂರು: ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಕೆ.ಎಸ್. ಸೋಮಶೇಖರ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಇಬ್ಬರೂ ಮಹನೀಯರ ಜಯಂತಿಯನ್ನು ಸರ್ಕಾರಿ ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕು. ಜತೆಗೆ ಎಲ್ಲ ಸರ್ಕಾರಿ ಇಲಾಖೆಗಳ ಕಟ್ಟಡವನ್ನು ದೀಪಗಳಿಂದ ಅಲಂಕರಿಸಬೇಕು ಎಂದು ಸೂಚಿಸಿದರು.

    ಏ.5 ರಂದು ಬಾಬು ಜಗಜೀವನರಾಂ ಹಾಗೂ ಏ.14ರಂದು ಅಂಬೇಡ್ಕರ್ ಜಯಂತಿ ಆಯೋಜಿಸಲಾಗಿದ್ದು, ಪಟ್ಟಣದ ನರಸಿಂಹಸ್ವಾಮಿ ದೇಗುಲ ಆವರಣದಿಂದ ಮದ್ದೂರು ಪುರಸಭೆಯವರೆಗೆ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಬೇಕು. ಐವರು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

    ಹಿರಿಯ ದಲಿತ ಮುಖಂಡ ಸಿ.ಎ.ಕೆರೆ ಮೂರ್ತಿ ಮಾತನಾಡಿ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಪುರಸಭೆಯ ಮುಂಭಾಗವಿರುವ ಅಂಬೇಡ್ಕರ್ ಪ್ರತಿಮೆಗೆ ಒಂದು ವಾರ ಮುಂಚಿತವಾಗಿ ದೀಪಾಲಂಕಾರ ಮಾಡಬೇಕು. ಇದರೊಂದಿಗೆ ಜಗಜೀವನ ರಾಂ ಅವರ ದೊಡ್ಡ ಭಾವಚಿತ್ರಕ್ಕೆ ದೀಪ ಅಲಂಕಾರ ಮಾಡಬೇಕು ಎಂದು ಮನವಿ ಮಾಡಿದರು.

    ತಾ.ಪಂ ಇಒ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಗ್ರೇಡ್ 2 ತಹಸೀಲ್ದಾರ್ ಸೋಮಶೇಖರ್, ಸಿಪಿಐ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್, ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ಚಿದಂಬರ, ಮಧುಸೂದನ್, ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಚಾಮನಹಳ್ಳಿ ಮಂಜು, ತಾಲೂಕು ಮಟ್ಟದ ಅಧಿಕಾರಿಗಳಾದ ಸಿ.ಎಚ್.ಕಾಳೀರಯ್ಯ, ಡಾ. ತಿಮ್ಮೇಗೌಡ, ಮಂಗಳಮ್ಮ, ಕೆ.ಎಂ. ರೇಖಾ, ನಾರಾಯಣ್, ಡಾ. ನಾಗೇಂದ್ರ, ಪ್ರಕಾಶ್ ಗೋರ್ಜಿ, ಮೋಹನ್, ದಲಿತ ಮುಖಂಡರಾದ ಅಗರಲಿಂಗನದೊಡ್ಡಿ ಶಂಕರ್, ಮದ್ದೂರು ಶಿವು, ರವಿಕುಮಾರ್, ಕೃಷ್ಣಪ್ಪ, ಅರುವನಹಳ್ಳಿ ಸಿದ್ದರಾಜು, ಪುಟ್ಟರಾಮು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts