ಮೈಸೂರು: ಜೀವನದಲ್ಲಿ ತಪ್ಪುಗಳು ಕಷ್ಟಪಡದಿದ್ದರೂ ಅಗುತ್ತದೆ. ಒಳ್ಳೆಯ ಕೆಲಸಕ್ಕೆ ಪರಿಶ್ರಮ ಪಡಲೇಬೇಕು. ವ್ಯಸನಿಗಳು ಕುಡಿತದಿಂದ ಹೊರಬಂದು ಉತ್ತಮ ಸಮಾಜ ನಿರ್ಮಿಸಿ ಎಂದು ಮೈಸೂರು ವಿಶ್ವವಿದ್ಯಾನಿಲಯದ ಐ.ಕ್ಯು.ಎ.ಸಿ. ಸಂಯೋಜಕರಾದ ಡಾ.ಜೆ.ಲೋಹಿತ್ ಸಲಹೆ ನೀಡಿದರು.
ಬಸವಮಾರ್ಗ ವ್ಯಸನಮುಕ್ತ ಹಾಗೂ ಪುನರ್ವಸತಿ ಕೇಂದ್ರದ ವತಿಯಿಂದ ಆಯೋಜಿಸಿರುವ 10 ದಿನಗಳ ಉಚಿತ ಕುಡಿತ ಬಿಡಿಸುವ ಶಿಬಿರ ಹಾಗೂ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸುಲಭವಾಗಿ ಯಾವುದೇ ಕೆಲಸ ಆಗುವುದಿಲ್ಲ. ಯಶಸ್ಸಿಗೆ ಶ್ರಮವಹಿಸಬೇಕು. ಜೀವನ ಕೆಡಿಸಿಕೊಳ್ಳುವುದು ಸುಲಭ, ಆದರೆ ಮತ್ತೆ ಅದನ್ನು ಸರಿಪಡಿಸಿಕೊಳ್ಳುವುದು ಬಹಳ ಕಷ್ಟ. ಹಾಗಾಗಿ ಸಿಕ್ಕಿರುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮನುಷ್ಯ ಇನ್ನೊಬ್ಬರ ಬಗ್ಗೆ ಬದುಕಿದಾಗ ತಪ್ಪುಗಳನ್ನು ಕಡಿಮೆ ಮಾಡುತ್ತಾನೆ. ತಾನು ಎನ್ನುವವನು ಮಾತ್ರ ಹೆಚ್ಚಾಗಿ ತಪ್ಪುಗಳನ್ನು ಮಾಡುತ್ತಾನೆ. ಮನುಷ್ಯ ಜನ್ಮ ದೊಡ್ಡದು. ಅದನ್ನು ಹಾಳು ಮಾಡಿಕೊಳ್ಳದಿರಿ ಹುಚ್ಚಪ್ಪದಿರ ಎಂದು ದೊಡ್ಡವರು ಹೇಳಿದ್ದಾರೆ. ದೊರಕಿರುವ ಈ ಮಾನವ ಜನ್ಮವನ್ನು ಉತ್ತಮ ಕೆಲಸಗಳಿಗೆ ಬಳಸಿಕೊಳ್ಳಬೇಕು. ಆ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡಲು ಕೈ ಜೋಡಿಸಬೇಕು ಎಂದು ಮಾರ್ಗದರ್ಶನ ಮಾಡಿದರು.
ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯ ಚಟ ಇರುತ್ತದೆ. ಆದರೆ ಚಟ ನಮ್ಮ ಮತ್ತು ನಮ್ಮ ಕುಟುಂಬ ನೆಮ್ಮದಿಯ ವ್ಯವಸ್ಥೆಯನ್ನೇ ಹಾಳು ಮಾಡಬಾರದು. ಶಕ್ತಿಯೇ ಜೀವನ, ದೌರ್ಬಲ್ಯವ್ಯೇ ಮರಣ ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಾರೆ. ನಿಮ್ಮನ್ನು ಸದೃಢರನ್ನಾಗಿಸುವ ವಿಷಯ ನರಕದಲ್ಲಿ ಇದ್ದರೂ ಹೋಗಿ ತೆಗೆದುಕೊಂಡು ಬನ್ನಿ. ಆದರೆ ನಿಮ್ಮನ್ನು ದುರ್ಬಲರನ್ನಾಗಿ ಮಾಡುವ ವಿಷಯ ಸ್ವರ್ಗದಲ್ಲಿ ಇದ್ದರೂ ಅದನ್ನೂ ಕಾಲಿನ ಕಿರು ಬೆರಳಿನಲ್ಲೂ ಮುಟ್ಟಬೇಡಿ ಎಂದು ಸಲಹೆ ನೀಡಿದರು.
ನಿಮ್ಮ ಸಮಸ್ಯೆಗಳು ಕೇವಲ ನಿಮ್ಮನ್ನು ಮಾತ್ರ ಬಾಧಿಸುವುದಿಲ್ಲ. ನಿಮ್ಮ ಮನೆಯವರನ್ನೂ ಬಾಧಿಸುತ್ತದೆ. ಈ ಎಚ್ಚರಿಕೆ ನಮ್ಮಲ್ಲಿ ಇರಬೇಕು. ನಿಮ್ಮ ಸಮಸ್ಯೆಗೆ ಉತ್ತರ ಸಿಗಬೇಕು ಎಂದರೆ ನಿರಂತರವಾಗಿ ಒಳ್ಳೆಯ ಹವ್ಯಾಸದಲ್ಲಿ ಇರಬೇಕು. ಬಸವಮಾರ್ಗ ಸಂಸ್ಥೆ ಈ ರೀತಿಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಿದೆ. ಇದನ್ನು ಬಳಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಲ್ಲಿ ಜೀವನ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಬಸವಮಾರ್ಗ ಸಂಸ್ಥೆಯ ಸಂಸ್ಥಾಪಕ ಬಸವಣ್ಣ, ಸಿಬ್ಬಂದಿ ಬಾಲಸುಬ್ರಹ್ಮಣ್ಯಂ, ಆನಂದ್, ಸಂಜಯ್ ಇತರರಿದ್ದರು.
ಕುಡಿತದಿಂದ ಹೊರಬಂದು ಉತ್ತಮ ಸಮಾಜ ನಿರ್ಮಿಸಿ: ಮೈಸೂರು ವಿಶ್ವವಿದ್ಯಾನಿಲಯದ ಐ.ಕ್ಯು.ಎ.ಸಿ. ಸಂಯೋಜಕರಾದ ಡಾ.ಜೆ.ಲೋಹಿತ್

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…
ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife
Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…