More

    ಘಮಂಡಿಯಾ ಒಕ್ಕೂಟ ಅರ್ಧ ಮನಸ್ಸಿನಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿವೆ: ಪ್ರಧಾನಿ ನರೇಂದ್ರ ಮೋದಿ

    ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಾವು ಮತದಾರರಿಗೆ ನೀಡಿರುವ ಅಷ್ಟು ಭರವಸೆಗಳನ್ನು ಈಡೇರಿಸುತ್ತೇವೆ. ಪ್ರತಿಪಕ್ಷಗಳ ಘಮಂಡಿಯಾ ಒಕ್ಕೂಟ ಅರ್ಧ ಮನಸ್ಸಿನಿಂದ ಮಹಿಳಾ ಮೀಸಲಾತಿಯನ್ನು ಬೆಂಬಲಿಸಿವೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದ ಕಾರ್ಯಕರ್ತರ ಮಹಾಕುಂಭ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ವಿರುದ್ಧ ಹರಿಹಾಯ್ದಿದ್ದಾರೆ.

    ಘಮಂಡಿಯಾ ಒಕ್ಕೂಟವು ಇತ್ತೀಚಿಗೆ ಮಂಡನೆಯಾದ ಮಹಿಳಾ ಮೀಸಲಾತಿ ಮಸೂದೆಯನ್ನು ಅರ್ಧ ಮನಸ್ಸಿನಿಂದ ಬೆಂಬಲಿಸಿದೆ. ವಿಪಕ್ಷಗಳು ಸಂಸತ್​ ಕಲಾಪವನ್ನು ಅಡ್ಡಿಪಡಿಸಿದ್ದವು ಮತ್ತು ಮಸೂದೆಯ ಪ್ರತಿಯನ್ನು ಹರಿದು ಹಾಕಿ ಸ್ಪೀಕರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಆದರೆ, ಜನರು ಇವರ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದಾರೆ.

    ಇದನ್ನೂ ಓದಿ: ಮಾತಾನಾಡುವ ಬದಲು ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ; ರಾಹುಲ್​ ಗಾಂಧಿಗೆ ಸವಾಲೆಸೆದ ಅಸಾದುದ್ದೀನ್​ ಓವೈಸಿ

    ಒಂದು ವೇಳೆ ಘಮಂಡಿಯಾ ಮೈತ್ರಿಕೂಟಕ್ಕೆ ಅಧಿಕಾರ ಸಿಕ್ಕಲ್ಲಿ ದೇಶದ ತಾಯಂದಿರು ಹಾಗೂ ಸಹೋದರಿಯರಿಗೆ ದ್ರೋಹ ಎಸಗುತ್ತದೆ. ಹಿಂದಿನ ಕಾಂಗ್ರೆಸ್​ ಸರ್ಕಾರವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ಮೋಸ ಮಾಡಿದೆ. ಆದರೆ, ನಾವು ಆ ರಿತಿ ಮಾಡುವುದಿಲ್ಲ. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಾವು ಮತದಾರರಿಗೆ ನೀಡಿರುವ ಅಷ್ಟು ಭರವಸೆಗಳನ್ನು ಈಡೇರಿಸುತ್ತೇವೆ. ಇದು ಮೋದಿ ನಿಮಗೆ ನೀಡುತ್ತಿರುವ ಗ್ಯಾರಂಟಿ ಎಂದು ವಾಗ್ದಾನ ಮಾಡಿದ್ದಾರೆ.

    ಇಷ್ಟು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್​ ಮಹಿಳೆಯರಿಗಾಗಿ ಏನನ್ನೂ ಮಾಡಿಲ್ಲ. ಆದರೆ, ಬಿಜೆಪಿ ಸರ್ಕಾರವು ಮಹಿಳೆಯರಿಗಾಇ ಉಜ್ವಲ ಯೋಜನೆ, ಬಯಲುಮುಕ್ತ ಶೌಚಾಲಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಭಿವೃದ್ದಿಗಾಗಿ ಕೆಲಸ ಮಾಡುತ್ತದೆ. ಆದರೆ, ಕಾಂಗ್ರೆಸ್​ ವೋಟ್​ಗಾಗಿ ಕೆಲಸ ಮಾಡುತ್ತದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts