19.5 C
Bangalore
Wednesday, December 11, 2019

ಮೂವರು ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಕ್ಕಳ ಕುತ್ತಿಗೆ ಕೊಯ್ದುರು

Latest News

ತಳೇವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಇಂದು ಮೃತ ದೇಹ ಪತ್ತೆ

ವಿಜಯಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಸಂಭವಿಸಿದೆ. ಸುದೀಪ (10)...

ಗ್ರಾಹಕರಿಗೆ ಸಿಹಿ ಸುದ್ದಿ: ಹೊಸ ಬೆಳೆಯ ಆಗಮನದಿಂದ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಇಳಿಕೆ

ನವದೆಹಲಿ: ಇತ್ತೀಚಿನ ವಾರಗಳಲ್ಲಿ ಗ್ರಾಹಕರಿಗೆ ಗಗನಕುಸುಮವಾಗಿದ್ದ ಈರುಳ್ಳಿ ಬೆಲೆಯು ಕೊಂಚ ಕೊಂಚವಾಗಿ ಇಳಿಯುವ ಲಕ್ಷಣಗಳು ಕಾಣುತ್ತಿವೆ. ರೈತರು ಹೊಸ ಬೆಳೆಯನ್ನು ಗುಜರಾತ್​ ಮತ್ತು...

ನ್ಯೂಜೆರ್ಸಿ ಕಿರಾಣಿ ಅಂಗಡಿಯಲ್ಲಿ ಶಂಕಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ : 6 ಮಂದಿ ಸಾವು

ನ್ಯೂಯಾರ್ಕ್: ನ್ಯೂಜೆರ್ಸಿ ನಗರದ ಜೆರ್ಸಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಅಡಗಿ ಕುಳಿತ​ ಶಂಕಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಇಬ್ಬರು...

ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಬುಲಾವ್​!

ಬೆಂಗಳೂರು: ಉಪಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬಹುತೇಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರವನ್ನು ಸುಭದ್ರ ಮಾಡಿಕೊಂಡಿದೆ. ಅದರಲ್ಲೂ ಇದೇ ಮೊದಲ ಬಾರಿಗೆ ಮಂಡ್ಯದ ಕೆ.ಆರ್​.ಪೇಟೆ...

ಜೋಳದ ಬೆಲೆ ಏರಿಕೆ: ರೊಟ್ಟಿಯೂ ಈಗ ಬಲು ತುಟ್ಟಿ!

ಲಕ್ಷ್ಮೇಶ್ವರ: ರೊಟ್ಟಿ ತಿಂದವನೇ ಬಲು ಗಟ್ಟಿ ಎಂಬುದು ಉತ್ತರ ಕರ್ನಾಟಕದ ನಾಣ್ಣುಡಿ. ಆದರೆ, ಈಗ ರೊಟ್ಟಿಯೂ ತುಟ್ಟಿಯಾಗುತ್ತಿದೆ. ಜೋಳದ ಬೆಲೆ ದಿನೇದಿನೆ...

ಗಾಜಿಯಾಬಾದ್​: ಉದ್ಯಮಿ ಮತ್ತು ಪತ್ನಿ ತಮ್ಮ ಮಕ್ಕಳ ಕುತ್ತಿಗೆ ಕೊಯ್ದು ಸಾಯಿಸಿ ನಂತರ ಎಂಟನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾರೆ. ಇವರ ಜತೆ ಇನ್ನೊಬ್ಬ ಮಹಿಳೆ ಕೂಡಾ ಜಿಗಿದಿದ್ದು ಆಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಪ್ರಕರಣ ದೆಹಲಿ ಸಮೀಪದ ಗಾಜಿಯಾಬಾದ್​ ಅಪಾರ್ಟ್​ಮೆಂಟನಲ್ಲಿ ನಡೆದಿದೆ. ದಂಪತಿ ಜತೆ ಹಾರಿದ ಆ ಮಹಿಳೆ ಉದ್ಯಮಿಯ ಪಾಲುದಾರಳು ಎಂದು ತಿಳಿದುಬಂದಿದೆ.

ಉದ್ಯಮಿ ದಂಪತಿಗೆ ಹಣದ ತೊಂದರೆ ಇತ್ತು. ಇದರಿಂದ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದಾರೆ, ಸಾಯುವ ಮುನ್ನ ಅವರು ಮನೆಯ ಗೋಡೆಯ ಮೇಲೆ ಡೆತ್​ನೋಟ್​ ಅಂಟಿಸಿದ್ದಾರೆ.

ಅಪಾರ್ಟ್​ಮೆಂಟ್​ನ ಸೆಕ್ಯೂರಿಟಿ ಗಾರ್ಡ್​ ಅಜಾಜ್​ ಕರೀಂ ಖಾನ್​, ಬೆಳಗ್ಗೆ 5 ಗಂಟೆ ಹೊತ್ತಿಗೆ ದಂಪತಿ ಶವ ಮತ್ತು ಅಸ್ವಸ್ಥಗೊಂಡ ಮಹಿಳೆಯನ್ನು ಕಂಡಿದ್ದಾನೆ.

ಬೆಳಗ್ಗೆ 5 ಗಂಟೆ ಅಂದಾಜಿಗೆ ಶಬ್ದ ಕೇಳಿದೆ. ಏನು ಎಂದು ನೋಡಲು ಹೋದಾಗ ಈ ಮೂವರೂ ಬಿದ್ದಿರುವುದು ಕಂಡಿತು. ತಕ್ಷಣ ನಮ್ಮ ಸೂಪರ್​ವೈಸರ್​ ಮತ್ತು ಪೊಲೀಸರಿಗೆ ಕರೆ ಮಾಡಿದೆ ಎಂದು ಖಾನ್​ ತಿಳಿಸಿದ್ದಾನೆ.

ಪೊಲೀಸರು ಅಪಾರ್ಟ್​ಮೆಂಟ್​ನ 806 ನಂಬರಿನ ಫ್ಲ್ಯಾಟ್​ಗೆ ತೆರಳಿದಾಗ 12 ವರ್ಷದ ಬಾಲಕಿ ಮತ್ತು 11 ವರ್ಷದ ಬಾಲಕನ ಶವ ರಕ್ತಸಿಕ್ತವಾಗಿ ಹಾಸಿಗೆಯಲ್ಲಿ ಬಿದ್ದಿರುವುದು ಕಂಡಿದೆ. ಫ್ಲ್ಯಾಟ್​ನ ರೂಂನಲ್ಲಿ ಒಂದಷ್ಟು ಹಣ ಸಿಕ್ಕಿದ್ದು, ಅದು ಅವರ ಅಂತ್ಯಸಂಸ್ಕಾರಕ್ಕೆ ಬಳಸುವಂತೆ ಡೆತ್​ನೋಟ್​ನಲ್ಲಿ ಬರೆದಿದ್ದಾರೆ.

ಕೆಳಗೆ ಬೀಳಲು ತೀರ್ಮಾನಿಸಿದ ಆ ಮೂವರು, ಮಹಡಿ ಮೇಲೆ ತೆರಳಿದ್ದಾರೆ. ನಂತರ ಉದ್ಯಮಿ ಕೆಲ ಗೆಳೆಯರಿಗೆ ವಿಡಿಯೋ ಕಾಲ್​ ಮಾಡಿ ಹಣಕಾಸಿನ ಸಮಸ್ಯೆಯಿಂದ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ.

ಇತ್ತೀಚೆಗೆ ಉದ್ಯಮದಲ್ಲಿ ನಷ್ಟ ಉಂಟಾಗಿತ್ತು. ಈತ ನೀಡಿದ ಹಲವು ಚೆಕ್​ಗಳು ಬೌನ್ಸ್​ ಆಗಿದ್ದವು. ಅಲ್ಲದೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ 2 ಕೋಟಿ ರೂಪಾಯಿಯಷ್ಟು ಮೋಸ ಮಾಡಿದ್ದ. ಇವರು ಕೆಲ ದಿಗಳ ಹಿಂದಷ್ಟೆ ಈ ಅಪಾರ್ಟ್​ಮೆಂಟ್​ಗೆ ಬಂದಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ. (ಏಜೆನ್ಸಿಸ್​)

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...