More

    ಘೋಸ್ಟ್ ಮೊದಲ ಹಂತದ ಚಿತ್ರೀಕರಣ ಪೂರ್ಣ

    ಬೆಂಗಳೂರು: ಶಿವರಾಜಕುಮಾರ್ ಅಭಿನಯದ ಎಂಜಿ ಶ್ರೀನಿ ನಿರ್ದೇಶಿಸುತ್ತಿರುವ ‘ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಇತ್ತೀಚೆಗಷ್ಟೆ ಪೂರ್ಣಗೊಂಡಿದೆ. ಬಹುಕೋಟಿ ವೆಚ್ಚದ ಈ ಪ್ಯಾನ್ ಇಂಡಿಯಾ ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದ್ದು, ಶಿವರಾಜಕುಮಾರ್ ವಿಭಿನ್ನ ಲುಕ್​ನಲ್ಲಿ ಮಿಂಚಿದ್ದಾರೆ. ಈಗಾಗಲೇ ಅವರ ಮಾಸ್ ಲುಕ್ ರಿವೀಲ್ ಆಗಿದ್ದು, ನಿರೀಕ್ಷೆ ಮೂಡಿಸಿದೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ ಮೊದಲ ಹಂತದ ಚಿತ್ರೀಕರಣಕ್ಕಾಗಿ ಕಲಾ ನಿರ್ದೇಶಕ ಮೋಹನ್ ಬಿ. ಕೆರೆ 15 ಬೃಹತ್ ಸೆಟ್​ಗಳನ್ನು ನಿರ್ವಿುಸಿದ್ದರು. ಸುಮಾರು 28 ದಿನಗಳ ಕಾಲ ಈ ಸೆಟ್​ಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಡಿಸೆಂಬರ್​ನಲ್ಲಿ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.

    ‘ಟೋಪಿವಾಲ’, ‘ಬೀರ್​ಬಲ್’, ‘ಓಲ್ಡ್ ಮಾಂಕ್’ ಚಿತ್ರಗಳನ್ನು ನಿರ್ದೇಶಿಸಿದ್ದ ಎಂಜಿ ಶ್ರೀನಿವಾಸ್ ಅವರಿಗಿದು ನಾಲ್ಕನೇ ಸಿನಿಮಾ. ಅವರೇ ಕಥೆ, ಚಿತ್ರಕಥೆ ಬರೆದಿದ್ದು, ಮಾಸ್ತಿ ಮತ್ತು ಪ್ರಸನ್ನ ಸಂಭಾಷಣೆ, ಅರ್ಜುನ್ ಜನ್ಯ ಸಂಗೀತ ಹಾಗೂ ಮಹೇಂದ್ರ ವರ್ಮ ಛಾಯಾಗ್ರಹಣ ಚಿತ್ರಕ್ಕಿದೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ಸಂದೇಶ್ ಎನ್ ಸಿನಿಮಾ ನಿರ್ವಿುಸುತ್ತಿದ್ದಾರೆ. ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿವೆ. ಶಿವರಾಜಕುಮಾರ್ ಜತೆ ಜಯರಾಮ್ ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

    ಕೊನೆಗೂ ಹೆಚ್ಚಾಯ್ತು ಹಾಲು-ಮೊಸರು ದರ; ನಾಳೆಯಿಂದಲೇ ಹೊಸ ಬೆಲೆ ಜಾರಿ!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts