ಮಗಳ ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆಗೆ ಕೊಡುಗೆ

New Project (53)
Published on

ಬಂಟ್ವಾಳ: ಬಂಟ್ವಾಳ ತಾಲೂಕಿನ ಉದ್ಯಮಿ ಗಣೇಶ್ ಪೂಜಾರಿ ತಮ್ಮ ಮಗಳು ಶಾರ್ವಿಯ 5ನೇ ವರ್ಷದ ಹುಟ್ಟುಹಬ್ಬವನ್ನು ಸರ್ಕಾರಿ ಶಾಲೆಗಳಿಗೆ ಉಪಯುಕ್ತ ಸಾಮಗ್ರಿ ನೀಡುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಿ ಮಾದರಿಯಾಗಿದ್ದಾರೆ.

ಮಗಳ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯ ಎಲ್ಲ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ, ಮಿತ್ತಪೆರಾಜೆ ಅಂಗನವಾಡಿ ಪುಟಾಣಿಗಳಿಗೆ ಊಟದ ತಟ್ಟೆ ಹಾಗೂ ಮಲ್ಲಡ್ಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ಟೀಲ್ ಲೋಟಗಳನ್ನು ಕೊಡುಗೆಯಾಗಿ ನೀಡುವ ಮೂಲಕ ತಮ್ಮ ಸಂಭ್ರಮ ಹಂಚಿಕೊಂಡಿದ್ದಾರೆ.

ಶಾಲೆಯ ಎಲ್ಲ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಿಸಿ, ಜತೆಗೆ ಮಕ್ಕಳಿಗೆ ಇಷ್ಟವಾದ ಐಸ್‌ಕ್ರೀಮ್ ನೀಡಿ ಸರಳ ಕಾರ್ಯಕ್ರಮದೊಂದಿಗೆ ಹುಟ್ಟುಹಬ್ಬ ಆಚರಿಸಿದರು. ಶಾಲಾ ಮುಖ್ಯಶಿಕ್ಷಕಿ ಡಾ.ತ್ರಿವೇಣಿ ರಮೇಶ್ ಸ್ವಾಗತಿಸಿದರು. ಸಹ ಶಿಕ್ಷಕ ಉದಯಚಂದ್ರ ವಂದಿಸಿದರು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ದೀಕ್ಷಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net