More

    ಮಳೆಗೆ ಕೊಚ್ಚಿಹೋದ ಶುಂಠಿ

    ಸರಗೂರು: ನಾಲ್ಕೈದು ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಹತ್ತಿ, ಶುಂಠಿ, ಇತರ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂಕಿನ ಬಿ.ಮಟಕೆರೆ ಗ್ರಾಪಂ ವ್ಯಾಪ್ತಿಯ ಬಾಡಗ ಗ್ರಾಮದ ಚಂದ್ರ ಅವರ ಜಮೀನಿನಲ್ಲಿ ಬೆಳೆದಿದ್ದ ಶುಂಠಿ ಬೇರು ಸಮೇತ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಸಾಲ ಮಾಡಿ ಶುಂಠಿ ಬಿತ್ತಿದ್ದ ರೈತನಿಗೆ ಮಳೆ ಅವಾಂತರ ಸೃಷ್ಟಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ನೀರು ನಿಂತಿದ್ದು, ಯಾವುದೇ ಕೃಷಿ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂಗಾರು ಬಿತ್ತನೆಗಾಗಿ ಬೀಜ, ರಸಗೊಬ್ಬರ ಖರೀದಿಸಲು ರೈತರನ್ನು ಚಿಂತೆಗೆ ದೂಡಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts