

ಬಂಟ್ವಾಳ: ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆ ಕಾಯ್ದುಕೊಳ್ಳಬೇಕಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮಹಿಳಾ ಮಂಡಲ ಮಂಚಿ, ಕುಕ್ಕಾಜೆ ಇದರ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗಿರಿಜಾ ರತ್ನ ಪ್ರಶಸ್ತಿ ಪ್ರದಾನ, ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಭಾಗವಹಿಸಿ ಮಾತನಾಡಿದರು.
ಸಂಸ್ಥೆಯ ಸ್ಥಾಪಕಿ ಶೈಲಜಾ ರಾಜೇಶ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮಂಡಳಿಯ ಸಮಾಜ ಸೇವಕಿ ಭಾಗೀರಥಿ ಕಾರ್ಯಕ್ರಮ ಉದ್ಘಾಟಿಸಿ, ಮಂಚಿ ಕುಕ್ಕಾಜೆ ಮಹಿಳಾ ಮಂಡಳಿ ಸಂಘವನ್ನು, ಬಾಳ್ತಿಲ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಜತೆ ವಿಲೀನಗೊಳಿಸಿ ಅಧಿಕಾರ ಹಸ್ತಾಂತರ ಮಾಡಿದರು.
ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮಂಚಿ ಗ್ರಾಪಂ ಅಧ್ಯಕ್ಷ ಇಬ್ರಾಹಿಂ, ಬೂಡ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ. ಮಾಜಿ ಸದಸ್ಯ ತುಂಗಪ್ಪ ಬಂಗೇರ, ಬಿಲ್ಲವ ಸಂಘ ಇರಾ ಅಧ್ಯಕ್ಷ ಜಯರಾಮ ಪೂಜಾರಿ, ಪದ್ಮನಾಭ ಕೋಟ್ಯಾನ್, ಮೂರ್ತೆದಾರರ ಮಹಾಮಂಡಲದ ನಿರ್ದೇಶಕ ಗಣೇಶ್ ಪೂಜಾರಿ, ಹೋಟೆಲ್ ಉದ್ಯಮಿ ಸದಾನಂದ ಬಂಗೇರ, ಸಜೀಪ ಮೂಡ ಗ್ರಾಪಂ ಅಧ್ಯಕ್ಷೆ ಶೋಭಾ ಶೆಟ್ಟಿ, ಕೊಳ್ನಾಡು ಗ್ರಾಪಂ ಮಾಜಿ ಅಧ್ಯಕ್ಷೆ ಜಯಂತಿ, ಮೋತಿಮಾರು ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ ಪ್ರಭು, ತುಳಸಿ, ಶಾರದಮ್ಮ, ದೇವಕಿ ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
ಪುರಸ್ಕೃತರಿಗೆ ಅಭಿನಂದನೆ
ಭಾಗೀರಥಿ ಅವರಿಗೆ ರಾಜ್ಯಮಟ್ಟದ ಗಿರಿಜಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಜೀವ ಪೂಜಾರಿ ಕೆ, ಪದ್ಮನಾಭ ಕೋಟ್ಯಾನ್, ಮನೋಜ್ ಕನಪಾಡಿ, ಸದಾಶಿವ ಡಿ.ತುಂಬೆ, ಗಂಗಾಧರ ಆಳ್ವ ತುಂಬೆ, ಯಾಸಿರ್ ಕಲ್ಲಡ್ಕ ಅವರನ್ನು ಅಭಿನಂದಿಸಲಾಯಿತು. ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು ನೀಡಲಾಯಿತು.