More

    ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ; ಕಾಸರವಳ್ಳಿ ಅವರಿಗೆ ಸನ್ಮಾನ

    ಬೆಂಗಳೂರು: ಕನ್ನಡದ ಹೆಮ್ಮೆಯ ನಿರ್ದೇಶಕ ಗಿರೀಶ್​ ಕಾಸರವಳ್ಳಿ ಅವರು ಬರೀ ಚಿತ್ರಗಳನ್ನು ನಿರ್ದೇಶಿಸಿರುವುದಷ್ಟೇ ಅಲ್ಲ, ಕೆಲವು ಸಾಕ್ಷ್ಯಚಿತ್ರಗಳನ್ನು ಮಾಡಿದ್ದಾರೆ. ಅವರ ನಿರ್ದೇಶನದ ‘ನಾದದ ನವನೀತ’ ಎಂಬ ಸಾಕ್ಷ್ಯಚಿತ್ರಕ್ಕೆ 68ನೇ ರಾಷ್ಟ್ರಪ್ರಶಸ್ತಿ ಸಹ ಸಿಕ್ಕಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

    ಇದನ್ನೂ ಓದಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್​: ರಣಬೀರ್​ ಕಪೂರ್​ ಕುಟುಂಬಕ್ಕೆ ಮಹಾಲಕ್ಷ್ಮೀಯ ಆಗಮನ

    ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿವರ್ಷ ನಾಡಿನ ಸಾಧಕರು, ಪ್ರತಿಭಾವಂತರ ಕುರಿತಂತೆ ಸಾಕ್ಷ್ಯ ಚಿತ್ರಗಳನ್ನು ತಯಾರಿಸುತ್ತದೆ. ಈವರೆಗೂ ನೂರಾರು ಮಂದಿಯ ಜೀವನಕಥೆಗಳನ್ನು ಇಲಾಖೆ ತಯಾರಿಸಿದೆ. ಇದೇ ಮೊದಲ ಬಾರಿಗೆ ಕಥೇತರ ವಿಭಾಗದಲ್ಲಿ ಇಲಾಖೆ ನಿರ್ಮಿಸಿದ ಹೆಸರಾಂತ ಹಿಂದುಸ್ತಾನಿ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಕುರಿತ ಸಾಕ್ಷ್ಯ ಚಿತ್ರಕ್ಕೆ ಕಥೇತರ ವಿಭಾಗದಲ್ಲಿ ‘ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿ ಚಿತ್ರ’ ಎಂಬ ಪ್ರಶಸ್ತಿ ದೊರೆತಿದೆ. ಈ ಚಿತ್ರವನ್ನು ನಿರ್ದೇಶಿಸಿರುವ ಗಿರೀಶ್ ಕಾಸರವಳ್ಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಡಿಯಲ್ಲಿ ಡಾ.ಪಿ. ಎಸ್. ಹರ್ಷ ನಿರ್ಮಾಣ ಮಾಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ಗಿರೀಶ್ ಕಾಸರವಳ್ಳಿ, ‘ನಾನು ಮೂಲತಃ ಚಿತ್ರ ನಿರ್ದೇಶಕ, ಸಾಕ್ಷ್ಯಚಿತ್ರ ನಿರ್ದೇಶಕನಲ್ಲ. ಆದರೂ ಅನಂತಮೂರ್ತಿ, ಗೋಪಾಲಕೃಷ್ಣ ಅಡಿಗರ ಕುರಿತಾದ ಸಾಕ್ಷ್ಯಚಿತ್ರಗಳನ್ನು ನಿರ್ದೇಶನ ಮಾಡಿ ಪ್ರಶಸ್ತಿಗಳನ್ನು ಸ್ವೀಕರಿಸಿದೆ. ರಾಜಕೀಯ ನಂಟಿಲ್ಲದ ಹಾಗೂ ಇಂಗ್ಲೀಷ್ ಬಾರದ ಹೆಸರಾಂತ ಹಿಂದುಸ್ತಾನಿ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಸಾಕ್ಷ್ಯಚಿತ್ರವನ್ನು ಇಲಾಖೆಯೊಂದಿಗೆ ಜೊತೆಗೂಡಿ ನಿರ್ಮಾಣ ಮಾಡಲು ಹೊರಟಾಗ ಇದು ಕೇವಲ ಸಂದರ್ಶನವಾಗಬಾರದು, ಬೇರೆ ರೀತಿಯಲ್ಲಿ ಮಾಡಬೇಕೆಂದು ತೀರ್ಮಾನಿಸಿದೆವು. ಈ ನಿಟ್ಟಿನಲ್ಲಿ ಮೂಡಿಬಂದಿದ್ದೇ ‘ನಾದದ ನವನೀತ’. ಕರ್ನಾಟಕದಲ್ಲಿ ಅನೇಕ ಸಾಧಕರು ತಮ್ಮ ಸಾಧನೆಯನ್ನು ಬಿಟ್ಟು ಹೋಗಿದ್ದಾರೆ ಅವುಗಳು ಸರಿಯಾಗಿ ದಾಖಲಾಗಿಲ್ಲ. ಅಂತಹ ವ್ಯಕ್ತಿಗಳ ಪರಿಚಯ ಮುಂದಿನ ಪೀಳಿಗೆಗೆ ಆಗಬೇಕು. ಇದು ಸಾಧ್ಯವಾಗಬೇಕಾದರೆ ಸರ್ಕಾರ ಮನಸ್ಸು ಮಾಡಬೇಕು’ ಎಂದು ಇದೇ ಸಂದರ್ಭದಲ್ಲಿ ಗಿರೀಶ್ ಕಾಸರವಳ್ಳಿ ತಿಳಿಸಿದರು.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ. ಎಸ್. ಹರ್ಷ ಮಾತನಾಡಿ ಸಮಾಜಕ್ಕಾಗಿ ದುಡಿದ ಅದೆಷ್ಟೋ ಮುಖಗಳು ಇಂದಿನ ಯುವ ಪೀಳಿಗೆಗೆ ತಿಳಿದಿಲ್ಲ. ಈ ಕುರಿತು ಅರಿವನ್ನು ಮೂಡಿಸಲು ಮಾಡಿದ ಸಾಕ್ಷ್ಯಚಿತ್ರವೇ ‘ನಾದದ ನವನೀತ’. ಗಿರೀಶ್ ಕಾಸರವಳ್ಳಿ ಅವರು ತುಂಬಾ ಅದ್ಭುತವಾಗಿ ಅದನ್ನು ಸಾಕ್ಷೀಕರಿಸಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಬರುವ ಹಾಗೆ ಮಾಡಿ ನಾಡಿಗೆ ಹೆಮ್ಮೆ ತಂದಿದ್ದಾರೆ’ ಎಂದು ಸಂತಸ ಹಂಚಿಕೊಂಡರು.

    ಇದನ್ನೂ ಓದಿ: KGFನಲ್ಲಿ ಹಿಂಸೆಯ ವೈಭವೀಕರಣದ ಬಗ್ಗೆ ಟೀಕೆ: ಒಳ್ಳೆಯ ವಿಚಾರಗಳನ್ನು ಬೋಧಿಸಲು ಸಾಧ್ಯವಿಲ್ಲ ಎಂದ ನಟ ಯಶ್​

    ಇದೇ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ಭಾ.ಮ. ಹರೀಶ್​, ಸುಂದರ್​ರಾಜ್​, ಜೈಜಗದೀಶ್​, ಶಿಲ್ಪಾ ಶ್ರೀನಿವಾಸ್​. ಉಮೇಶ್​ ಬಣಕಾರ್​ ಮುಂತಾದವರು ಹಾಜರಿದ್ದರು.

    ನಖರಾ ಮಾಡಿದ ನಾಯಕನಿಗೆ ಚಿತ್ರದಿಂದ ಗೇಟ್​ಪಾಸ್ ಕೊಟ್ಟ ಅರ್ಜುನ್​ ಸರ್ಜಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts