

ಬೈಂದೂರು: ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ನಿಕಟ ಪೂರ್ವಾಧ್ಯಕ್ಷ ಗಿರೀಶ ಶ್ಯಾನುಭಾಗ್ ಲಯನ್ಸ್ ಜಿಲ್ಲೆ 317ಸಿ ನೂತನ ವಲಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪ್ಪುಂದ ಜೆಸಿಐ ಅಧ್ಯಕ್ಷ ಹಾಗೂ ತರಬೇತುದಾರಾಗಿ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿದ್ದು, ಪ್ರಸ್ತುತ ರಾಷ್ಟ್ರೀಯ ಸಂಯೋಜಕರಾಗಿ, ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.