ಅನೇಕರಿಗೆ ಒಂದೇ ಸಿರಿಂಜ್ ಬಳಸಿದ ವೈದ್ಯ; ಬಾಲಕಿಗೆ ಎಚ್ಐವಿ ಪಾಸಿಟಿವ್ ವರದಿ…

ಲಖ್ನೌ: ವೈದ್ಯರು ಅನೇಕ ರೋಗಿಗಳ ಮೇಲೆ ಒಂದು ಸಿರಿಂಜ್ ಬಳಸಿದ ನಂತರ ಹೆಣ್ಣು ಮಗುವಿಗೆ ಎಚ್ಐವಿ ಪಾಸಿಟಿವ್ ಬಂದಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇಟಾದ ರಾಣಿ ಅವಂತಿ ಬಾಯಿ ಲೋಧಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಂದ ವಿವರಣೆ ಕೋರಲಾಗಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಶನಿವಾರ ಹೇಳಿದ್ದಾರೆ.

ಈ ವಿಷಯದಲ್ಲಿ ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಠಕ್ ಹೇಳಿದರು.

“ಇಟಾದ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು ಹಲವಾರು ರೋಗಿಗಳಿಗೆ ಅದೇ ಸಿರಿಂಜ್ ನಲ್ಲಿ ಚುಚ್ಚುಮದ್ದನ್ನು ನೀಡಲಾಗಿದ್ದು ಇದರಿಂದಾಗಿ ಮಗುವಿನ ಪರೀಕ್ಷಾ ವರದಿಯನ್ನು ಎಚ್ಐವಿ ಪಾಸಿಟಿವ್ ಬಂದಿದೆ. ಈ ಘಟನೆಗೆ ಸಂಬಧಿಸಿದಂತೆ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಂದ ವಿವರಣೆಯನ್ನು ಕೋರಲಾಗಿದೆ” ಎಂದು ಉಪಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಮತ್ತೊಂದು ಟ್ವೀಟ್ನಲ್ಲಿ, “ಯಾವುದೇ ವೈದ್ಯರು ತಪ್ಪಿತಸ್ಥರೆಂದು ಕಂಡುಬಂದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬರೆದಿದ್ದಾರೆ.

ಮಗುವಿನ ಪೋಷಕರು ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಕಿತ್ ಕುಮಾರ್ ಅಗರ್ವಾಲ್ ಅವರನ್ನು ಭೇಟಿಯಾಗಿ ಅದೇ ಸಿರಿಂಜ್ ಅನ್ನು ಹಲವಾರು ಮಕ್ಕಳಿಗೆ ಬಳಸಲಾಗಿದೆ ಎಂದು ದೂರಿದ್ದಾರೆ. ಆಕೆಯನ್ನು ಫೆಬ್ರವರಿ 0 ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಕೆಯ ಸಂಬಂಧಿಕರು ಹೇಳಿದ್ದಾರೆ. ಆದರೂ, ಆಕೆಗೆ ಎಚ್ಐವಿ ಪಾಸಿಟಿವ್ ಬಂದಾಗ, ಆರೋಗ್ಯ ಕಾರ್ಯಕರ್ತರು ತಡರಾತ್ರಿ ಅವರನ್ನು ಆಸ್ಪತ್ರೆಯಿಂದ ಹೊರಹಾಕಿದ್ದರು.

ದೂರು ಸ್ವೀಕರಿಸಿದ ನಂತರ, ತನಿಖೆಯನ್ನು ಪ್ರಾರಂಭಿಸಲಾಗಿದ್ದು ಮುಖ್ಯ ವೈದ್ಯಕೀಯ ಅಧಿಕಾರಿಗೆ (ಸಿಎಂಒ) ವರದಿ ಹಸ್ತಾಂತರಿಸಲಾಯಿತು ಎಂದು ಡಿಎಂ ಹೇಳಿದರು.

ಇಟಾದ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ಘಟನೆಯ ಬಗ್ಗೆ ತಿಳಿದುಕೊಂಡರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ ಎಂದು ಹೇಳಿದರು. ತನಿಖೆ ಮುಗಿದ ನಂತರ, ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವರದಿಯನ್ನು ಸಲ್ಲಿಸಲಾಗುವುದು. (ಏಜೆನ್ಸೀಸ್)

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…