ಪೋಷಕರಾಡಿದ ಈ ಮಾತು ತಪ್ಪಾ?; ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣವೇನು?

gfdhgf
Published on

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಯುವಜನತೆಯ ಸಂಖ್ಯೆ ಹೆಚ್ಚುತ್ತಿದೆ. ಪರೀಕ್ಷಯಲ್ಲಿ ಅಂಕ ಕಡಿಮೆ ಬಂತು, ಹೆತ್ತವರು ಬೈದ್ರೂ, ಮೊಬೈಲ್​​ ತೆಗೆದುಕೊಟ್ಟಿಲ್ಲ ಎನ್ನುವ ಕಾರಣಕ್ಕೆಲ್ಲ ಆತ್ಮೆಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಾಳಿ ಬದುಕಬೇಕಾದ ಜೀವಗಳು, ಸಣ್ಣ ವಯಸ್ಸಿನಲ್ಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಇದೀಗ ತಾಲೂಕಿನ ಬೆಳ್ಳಾವಿಯಲ್ಲಿ ಪವಿತ್ರ (18) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪವಿತ್ರ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ. ಆಟವಾಡೋದ್ರಲ್ಲೇ ಸಮಯ ವ್ಯರ್ಥ ಮಾಡುತ್ತಿದ್ದೀಯಾ. ಓದಿಕೋ ಎಂದು ಹೆತ್ತವರು ಹೇಳಿದ್ದಾರೆ. ಪೋಷಕರ ಕಾಳಜಿಯ ಮಾತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ದಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಷಕರು ಕಾಳಜಿಯ ಮಾತನ್ನು ಅರ್ಥೈಸಿಕೊಳ್ಳದ ವಿದ್ಯಾರ್ಥಿನಿ, ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಬೆಳ್ಳಾವಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net