18.5 C
Bangalore
Monday, December 16, 2019

ಅಚಾನಕ್​ ಆಗಿ ಟಿಟ್ಟಿಭ ಹಕ್ಕಿ ಮೊಟ್ಟೆ ಒಡೆದ 5 ವರ್ಷದ ಬಾಲಕಿಗೆ ಊರಿಂದಲೇ ಬಹಿಷ್ಕಾರ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ರಾಜಸ್ಥಾನ: ಹಕ್ಕಿಯೊಂದರ ಮೊಟ್ಟೆಯನ್ನು ಆಕಸ್ಮಿಕವಾಗಿ ಮೆಟ್ಟಿ ಒಡೆದ 5 ವರ್ಷದ ಬಾಲಕಿಗೆ ಸ್ಥಳೀಯ ಕಾಪ್​ ಪಂಚಾಯಿತಿ ಊರಿನಿಂದಲೇ ಬಹಿಷ್ಕಾರ ಹಾಕಿದ ಮನಕಲುಕುವ ಘಟನೆ ಬುಂಡಿ ಜಿಲ್ಲೆಯಲ್ಲಿ ನಡೆದಿದೆ.

ಬುಂಡಿ ಜಿಲ್ಲೆಯ ಹರಿಪುರ ಗ್ರಾಮದ ಬಾಲಕಿ ಖುಷ್ಬೂ ಶಾಲೆಯಲ್ಲಿ ಬಿಸಿಯೂಟಕ್ಕೆ ಸಾಲಿನಲ್ಲಿ ನಿಲ್ಲುವ ವೇಳೆ ಅಚಾನಕ್ ಆಗಿ ಮೊಟ್ಟೆಯನ್ನು ಮೆಟ್ಟಿ ಒಡೆದಿದ್ದಕ್ಕೆ ಈ ಶಿಕ್ಷೆ ಅನುಭವಿಸಿದ್ದಾಳೆ.

ಮೊಟ್ಟೆ ಒಡೆಯುವುದಕ್ಕೂ, ಬಹಿಷ್ಕಾರಕ್ಕೂ ಏನು ಸಂಬಂಧ ಎಂದು ಹುಬ್ಬೇರಿಸಬೇಡಿ. ಅದರ ಕತೆ ಇಲ್ಲಿದೆ. ಹಾರಿಪುರ ಗ್ರಾಮದಲ್ಲಿ ಇರುವ ಪರಿಶಿಷ್ಟ ಸಮುದಾಯದ ಜನರು ಕೆಂಪು-ವ್ಯಾಟ್ಲ್ಡ್ ಲ್ಯಾಪ್ವಿಂಗ್ ಅಥವಾ ಕೆಂಪು ಟಿಟ್ಟಿಭ ಹಕ್ಕಿಯನ್ನು ತಮಗೆ ಶುಭ ಉಂಟುಮಾಡುವ ಹಕ್ಕಿಯೆಂದು ಭಾವಿಸಿದ್ದು ಅದು ಮೊಟ್ಟೆ ಹಾಕಿದರೆ ಉತ್ತಮ ಮಳೆಯಾಗುತ್ತದೆ ಎಂದು ನಂಬಿದ್ದಾರೆ. ಆ ಹಕ್ಕಿಯ ಮೊಟ್ಟೆಯನ್ನು ಖುಷ್ಬುತಿಳಿಯದೆ ಒಡೆದಿದ್ದಕ್ಕೆ ಚಿಕ್ಕ ಹುಡುಗಿ ಎಂದು ಕೂಡ ನೋಡದೆ ಮೂರು ದಿನ ಊರ ಹೊರಗೆ ಇರಬೇಕು ಎಂದು ಶಿಕ್ಷೆ ವಿಧಿಸಿದ್ದಾರೆ.

ಈ ಬಗ್ಗೆ ವಿವರಣೆ ನೀಡಿರುವ ಬಾಲಕಿಯ ಅಮ್ಮ ಮೀನಾ, ಖುಷ್ಬೂ ಶಾಲೆಯಲ್ಲಿ ಮೊಟ್ಟೆ ಒಡೆದಿದ್ದಾಳೆ. ಈ ವಿಷಯ ತಿಳಿದ ಕಾಪ್​ ಪಂಚಾಯಿತಿ ವಿಚಾರಣೆ ನಡೆಸಿ ಬಾಲಕಿಯನ್ನು ಮೂರು ದಿನ ಮನೆಗೆ ಸೇರಿಸದೆ ಊರ ಹೊರಗೆ ಗುಡಿಸಿಲಿನಲ್ಲಿ ಇಡಬೇಕು ಎಂದು ಆದೇಶ ನೀಡಿತ್ತು. ಇದಕ್ಕೆ ಆಕೆಯ ತಂದೆ ಹುಕುಮ್ಚಂದ್ ರೆಗರ್ ಒಪ್ಪದಿದ್ದಾಗ ಬಹಿಷ್ಕಾರವ ಅವಧಿಯನ್ನು 11 ದಿನಗಳಿಗೆ ವಿಸ್ತರಿಸುವುದಾಗಿ ಬೆದರಿಕೆ ಹಾಕಿದೆ ಎಂದಿದ್ದಾರೆ.
ಅಲ್ಲದೆ, ಮೊಟ್ಟೆ ಒಡೆದಿದ್ದಕ್ಕೆ ಖುಷ್ಬೂ ಕುಟುಂಬ ಪ್ರಾಯಶ್ಚಿತಕ್ಕಾಗಿ ಗ್ರಾಮದ ಪ್ರತಿ ಮನೆಗೂ ಉಪ್ಪು ಹಾಗೂ ಕಡಲೆ ಬೀಜವನ್ನು ನೀಡಬೇಕು ಎಂದು ಪಂಚಾಯಿತಿ ಆದೇಶ ನೀಡಿದೆ.

ಬಹಿಷ್ಕಾರವ ಅವಧಿ ಮುಗಿದ ಮೇಲೆ ಈ ವಿಷಯ ಪೊಲೀಸರ ಗಮನಕ್ಕೆ ಬಂದಿದೆ. ಬಾಲಕಿಗೆ ಸ್ಥಳೀಯ ಆಡಳಿತ ಶಿಕ್ಷೆ ನೀಡಿದ್ದರ ಬಗ್ಗೆ ತಮಗೆ ಯಾವುದೇ ದೂರು ಕುಟುಂಬದಿಂದ ಬಂದಿಲ್ಲ ಎಂದು ಪೊಲೀಸ್​ ಸರ್ಕಲ್​ ಇನ್ಸ್​ಪೆಕ್ಟರ್​ ಲಕ್ಷ್ಮಣ್ ಸಿಂಗ್​ ತಿಳಿಸಿದ್ದಾರೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...