ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ: ಸಹೋದರಿಯಿಂದಲೇ ಕೊಲೆ ರಹಸ್ಯ ಬಯಲು

ಪುರಿ: ತಂದೆ ಮತ್ತು ಮಲ ತಾಯಿ ಸೇರಿಕೊಂಡು 17 ವರ್ಷದ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್​ ಪ್ರದೇಶದಲ್ಲಿ ನಿನ್ನೆ (ಜ.9) ರಾತ್ರಿ ನಡೆದಿದೆ. ಸಾಕ್ಷಿಯನ್ನು ನಾಶ ಮಾಡಲು ಮಗಳ ಶವವನ್ನು ಸುಟ್ಟು ಹಾಕಿರುವುದಾಗಿ ವರದಿಯಾಗಿದೆ. ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್​ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಾಚರಣ ಮೊಹರಾಣ ಎಂಬುವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. … Continue reading ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ: ಸಹೋದರಿಯಿಂದಲೇ ಕೊಲೆ ರಹಸ್ಯ ಬಯಲು