ಬಂಕಾಪುರ: 10 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವಿರುದ್ಧ ಇಲ್ಲಿಯ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಇಲ್ಲಿಗೆ ಸಮೀಪದ ಬಾಡ ಗ್ರಾಮದ ರಾಮಪ್ಪ ಹರಿಹರ (26) ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ.
ಈತ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
