ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ ಎಂಟನೇ ತರಗತಿ ವಿದ್ಯಾರ್ಥಿನಿ: ಸ್ಥಳೀಯರಿಂದ ಪ್ರತಿಭಟನೆ

ಭುವನೇಶ್ವರ: ಅತ್ಯಾಚಾರ ಸಂತ್ರಸ್ತಳಾಗಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಂದಮಾಲ ಜಿಲ್ಲೆಯ ಶಾಲೆಯಲ್ಲಿ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ್ದಾಳೆ. ಅದಾದ ಬಳಿಕ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಅಪರಾಧಕ್ಕೆ ಕಾರಣವಾದವರನ್ನು ಕೂಡಲೇ ಬಂಧಿಸಬೇಕು ಎಂದು ಪೊಲೀಸರಿಗೆ ಆಗ್ರಹಿಸಿದ್ದಾರೆ. ಬಾಲಕಿ ಎಂಟು ತಿಂಗಳ ಹಿಂದೆ ಶಾಲೆಯಿಂದ ಮನೆಗೆ ಹೋಗುವಾಗ ಅತ್ಯಾಚಾರಕ್ಕೆ ಒಳಗಾಗಿದ್ದಳು ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಾಲೆಯ ಮುಖ್ಯಶಿಕ್ಷಕಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಬಾಲಕಿ ಗರ್ಭಿಣಿಯಾಗಿದ್ದುಕೊಂಡು ಹಲವು ತಿಂಗಳುಗಳಿಂದ ಶಾಲೆಗೆ ಆಗಮಿಸುತ್ತಿದ್ದರೂ ಪೊಲೀಸರಿಗೆ ತಿಳಿಸದೆ ಇರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಒಟ್ಟು ಏಳು ಮಂದಿ ಶಾಲಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸದ್ಯ ಬಾಲಕಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಪೂರ್ಣ ವರದಿ ನೀಡಲು ಕಲೆಕ್ಟರ್​ಗೆ ಸೂಚನೆ ನೀಡಿದ್ದೇವೆ. ಪೊಲೀಸರೂ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್​ಸಿ ಎಸ್​ಟಿ ಕಲ್ಯಾಣ ಇಲಾಖೆ ಸಚಿವ ರಮೇಶ್​ ಚಂದ್ರ ಮಹ್ಜಿ ಹೇಳಿದ್ದಾರೆ.

2 Replies to “ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ ಎಂಟನೇ ತರಗತಿ ವಿದ್ಯಾರ್ಥಿನಿ: ಸ್ಥಳೀಯರಿಂದ ಪ್ರತಿಭಟನೆ”

  1. ಈ ಲೋಕದಲ್ಲಿ ಹೆಣ್ಣು ಗಂಡುಗಳು ಇರುವವರೆವಿಗೂ ಇಂತಹ ಘಟನೆಗಳು ಕೊನೆಯಾಗುವುದಿಲ್ಲ.

Comments are closed.