More

    ಬಾಲಕಿಗೆ ಲೈಂಗಿಕ ಕಿರುಕುಳ, 20 ವರ್ಷ ಜೈಲು ಶಿಕ್ಷೆ

    ಶಿವಮೊಗ್ಗ: ಮನೆಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂ. ದಂಡ ವಿಧಿಸಿದ್ದಾರೆ.
    ತೀರ್ಥಹಳ್ಳಿ ತಾಲೂಕಿನ ಬಿ.ಸಿ.ವೆಂಕಟೇಶ್ (20) ಶಿಕ್ಷೆಗೆ ಒಳಗಾದವ. ಈತ 2020ರ ಡಿ.5ರಂದು ಮನೆಯಲ್ಲಿ ಆಡುವಾಡುತ್ತಿದ್ದ ಐದು ವರ್ಷ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
    ಅಂದಿನ ತನಿಖಾಧಿಕಾರಿಯಾಗಿದ್ದ ತೀರ್ಥಹಳ್ಳಿ ವೃತ್ತ ನಿರೀಕ್ಷಕ ಪ್ರವೀಣ್ ನೀಲಮ್ಮನವರ್ ವೆಂಕಟೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಶನಿವಾರ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್, ವೆಂಕಟೇಶ್‌ನ ಮೇಲಿನ ಆರೋಪಗಳು ಸಾಬೀತಾದ ಹಿನ್ನಲೆಯಲ್ಲಿ ಬರೋಬ್ಬರಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. 60 ಸಾವಿರ ರೂ. ದಂಡವನ್ನೂ ಹಾಕಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts