More

    ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ; ಕ್ರೀಡಾ ಸಾಧನೆಗೆ ಮಾನಸಿಕ ಸದೃಢತೆ ಅಗತ್ಯ

    ಧಾರವಾಡ: ಕ್ರೀಡಾಪಟು ದೈಹಿಕವಾಗಿ ಕ್ರೀಡೆಯಲ್ಲಿ ಭಾಗವಹಿಸಿದರೂ ಗೆಲುವಿನ ಹಾದಿ ಅವನ ಮನಸ್ಸಿನಿಂದಲೇ ಆರಂಭವಾಗುತ್ತದೆ. ಕ್ರೀಡಾ ಸಾಧನೆಗೆ ಮಾನಸಿಕ ಸದೃಢತೆಯೂ ಅಗತ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
    ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘಗಳ ಆಶ್ರಯದಲ್ಲಿ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ೩ ದಿನಗಳ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕಿಯರ ಅಥ್ಲೆಟಿಕ್ಸ್ ಪಂದ್ಯಾವಳಿಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
    ಕ್ರೀಡೆಗಳು ನಮ್ಮ ಸೃಜನಾತ್ಮಕತೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಪಠ್ಯಕ್ಕೆ ನೀಡುವಷ್ಟು ಮಹತ್ವವನ್ನು ಸಹಪಠ್ಯ ಚಟುವಟಿಕೆಗಳಿಗೂ ನೀಡಬೇಕು. ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಪ್ರತಿಯೊಬ್ಬ ಕ್ರೀಡಾಪಟು ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.
    ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯಾಧ್ಯಕ್ಷ ಯು.ಎನ್. ಹಜಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಡಿ. ಹನುಮಂತಪ್ಪ ಸ್ವಾಗತಿಸಿದರು.
    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಪಿ. ಸುರೇಶ ಅಧ್ಯಕ್ಷತೆ ವಹಿಸಿದ್ದರು. ಡಾ. ತೇಜಸ್ವಿನಿ ನಾರಾಯಣಕರ, ಬಸವರಾಜ ಟಿ.ಆರ್., ಆರ್.ಕೆ. ಇಸ್ಲಾಂಪೂರ, ಜಿ.ಬಿ. ತಹಸೀಲ್ದಾರ್, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts