More

    ಖಾಸಗಿ ಶಾಲಾ ಶುಲ್ಕದಲ್ಲಿ ಶೇ.15 ವಿನಾಯಿತಿ ನೀಡಲು ಹೈಕೋರ್ಟ್​ ಆದೇಶ

    ಬೆಂಗಳೂರು: ಖಾಸಗಿ ಮತ್ತು ಅನುದಾನಿತ ಶಾಲೆಗಳು ಶೇ.70ರಷ್ಟು ಬೋಧನಾ ಶುಲ್ಕ ಮಾತ್ರ ಸ್ವೀಕರಿಸುವಂತೆ ಸೂಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಪಡಿಸಿದೆ. ಆದಾಗ್ಯೂ 2021 ರ ಮೇ 3 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಂತೆ 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶುಲ್ಕ ವಿನಾಯಿತಿ ನೀಡಬೇಕೆಂದು ಆದೇಶಿಸಿದೆ.

    ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕವನ್ನು (ಟ್ಯೂಷನ್ ಫೀ) ಶೇ.30 ಕಡಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಕ್ಯಾಮ್ಸ್ ಹಾಗೂ ಇತರ ಖಾಸಗಿ ಶಾಲೆಗಳ ಸಂಘಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ನ್ಯಾಯಪೀಠ ಗುರುವಾರ ಪ್ರಕಟಿಸಿತು.

    ಇದನ್ನೂ ಓದಿ: ಅಪರಾಧದಲ್ಲಿ ಮುಂಚೂಣಿಯಲ್ಲಿರುವ ರಾಜಧಾನಿ! ಕೊಲೆ, ರೇಪ್, ಎಲ್ಲದರಲ್ಲೂ ಮುಂದೆ!

    ಖಾಸಗಿ ಮತ್ತು ಅನುದಾನಿತ ಶಾಲೆಗಳು 2019-20ನೇ ಸಾಲಿನಲ್ಲಿ ಎಷ್ಟು ಶುಲ್ಕವನ್ನು ಸಂಗ್ರಹ ಮಾಡಲಾಗಿತ್ತೋ ಆ ಶುಲ್ಕದಲ್ಲಿ ಶೇ.15 ರಷ್ಟು ವಿನಾಯಿತಿ ನೀಡಿ, 2020-21ನೇ ಸಾಲಿನ ಶುಲ್ಕ ಸಂಗ್ರಹಿಸಲು ಅವಕಾಶ ಕಲ್ಪಿಸಿ, ನ್ಯಾಯಾಲಯ ಎಲ್ಲ ಅರ್ಜಿಗಳನ್ನೂ ಇತ್ಯರ್ಥಪಡಿಸಿದೆ.

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ.ಕನ್ವೀಲ್ಕರ್ ಮತ್ತು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿದ್ದ ಪೀಠ ಜೋಧಪುರದ ಇಂಡಿಯನ್ ಸ್ಕೂಲ್ ಹಾಗೂ ರಾಜಸ್ಥಾನ ಸರ್ಕಾರದ ನಡುವಿನ ಪ್ರಕರಣದಲ್ಲಿ, 2020-21ನೇ ಸಾಲಿನ ಶುಲ್ಕದಲ್ಲಿ ಶೇ.15 ರಿಯಾಯಿತಿ ನೀಡಿ ಉಳಿದ ಶುಲ್ಕ ಸಂಗ್ರಹಿಸಲು ಖಾಸಗಿ ಶಾಲೆಗಳಿಗೆ ಅವಕಾಶ ಕಲ್ಪಿಸಿ 2021 ರ ಮೇ 3 ರಂದು ಆದೇಶಿಸಿತ್ತು. ಜತೆಗೆ, ಶಾಲೆಗಳು ಯಾವುದೇ ಕಾರಣಕ್ಕೂ ಮಕ್ಕಳನ್ನು ಆನ್‌ಲೈನ್ ತರಗತಿಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸಬಾರದು ಎಂದೂ ಹೇಳಿತ್ತು. ಇದೇ ತೀರ್ಪು ಆಧರಿಸಿ ರಾಜ್ಯ ಹೈಕೋರ್ಟ್ ಸಹ ಖಾಸಗಿ ಶಾಲೆಗಳಿಗೆ 2020-21ನೇ ಸಾಲಿಗೆ ಶೇ.15 ಬೋಧನಾ ಶುಲ್ಕ ವಿನಾಯಿತಿ ನೀಡಲು ಆದೇಶಿಸಿದೆ.

    ಉಗ್ರಾತಂಕ! ಹೈ ಅಲರ್ಟ್​ನಲ್ಲಿ ಮೈಸೂರು, ಬೆಂಗಳೂರು

    ಕರ್ನಾಟಕ ಧರ್ಮಛತ್ರ ಆಗೋದಕ್ಕೆ ಬಿಡಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

    ಬೆಂಗಳೂರಿನಲ್ಲಿ ಡ್ರಗ್ಸ್​ ಫ್ಯಾಕ್ಟರಿ ಪತ್ತೆ! ಮನೆಯಲ್ಲೇ ತಯಾರಿಸಿ ವಿವಿಧೆಡೆಗೆ ಸಪ್ಲೈ ಮಾಡ್ತಿದ್ದ ವಿದೇಶೀ ಪ್ರಜೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts