More

    ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿ

    ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜದವರಿಗೆ ರಾಜ್ಯದಲ್ಲಿ 2ಎ ಹಾಗೂ ಕೇಂದ್ರದಲ್ಲಿ ಒಬಿಸಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಧಾರವಾಡ ಜಿಲ್ಲಾ ಘಟಕ ವತಿಯಿಂದ ನಗರದಲ್ಲಿ ಅಪರ ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮಂಗಳವಾರ ಮನವಿಪತ್ರ ರವಾನಿಸಲಾಯಿತು.

    ಈ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿದೆ. ಮೀಸಲಾತಿ ನೀಡುವಂತೆ ಆಗ್ರಹಿಸಿ 26 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಸಿ ಹಕ್ಕೊತ್ತಾಯ ಮಂಡಿಸಲಾಯಿತು. ಆದರೂ ಸರ್ಕಾರ ಸ್ಪಂದಿಸಿಲ್ಲ. ಕೂಡಲೆ, ನಮ್ಮ ಸಮಾಜಕ್ಕೆ 2ಎ ಹಾಗೂ ಒಬಿಸಿ ಮೀಸಲಾತಿ ನೀಡಬೇಕು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದ ಮನವಿಯನ್ನು ಅಪರ ತಹಸೀಲ್ದಾರ್ ವಿಜಯಕುಮಾರ ಕಡಕೋಳ ಅವರ ಮೂಲಕ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ರವಾನಿಸಲಾಯಿತು. ಜಿಲ್ಲಾ ಘಟಕದ ಅಧ್ಯಕ್ಷ ಕಲ್ಲಪ್ಪ ಯಲಿವಾಳ, ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ರಾಜಶೇಖರ ಮೆಣಸಿನಕಾಯಿ, ಹುಬ್ಬಳ್ಳಿ ನಗರ ಘಟಕದ ಅಧ್ಯಕ್ಷ ನಂದಕುಮಾರ ಪಾಟೀಲ, ಮಹಿಳಾ ಘಟಕದ ಅಧ್ಯಕ್ಷೆ ದೀಪಾ ಗೌರಿ, ಪ್ರಮುಖರಾದ ಕುಮಾರ ಕುಂದನಹಳ್ಳಿ, ಉಳವಪ್ಪ ಬಳಿಗೇರ, ವೀರಣ್ಣ ನೀರಲಗಿ, ಬಸವರಾಜ ಬಳಿಗೇರ, ರವಿ ಹೊಸೂರ, ವಿನಯ ಪಟ್ಟಣಶೆಟ್ಟಿ ಇತರರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts