

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು, ನೌಕರರಿಗೆ ತಕ್ಷಣ ಪರಿಹಾರ ಮಂಜೂರು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಎಲ್ಲ ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.
ಕೋವಿಡ್ ಕರ್ತವ್ಯದ ಮೇಲೆ ಸಕ್ಷಮ ಪ್ರಾಧಿಕಾರದಿಂದ ನಿಯೋಜನೆಗೊಂಡು ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಲ್ಲಿ ಕೂಡಲೇ ಪರಿಹಾರ ಒದಗಿಸಬೇಕು ಹಾಗೂ ಪರಿಹಾರ ನೀಡಿರುವ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ಸಾರ್ವಜನಿಕ ಇಲಾಖೆ ಆಯುಕ್ತ ಅನ್ಬುಕುಮಾರ್ ಕೋರಿದ್ದಾರೆ.
ಕೋವಿಡ್‌ನಿಂದ ಉಂಟಾಗಿರುವ ಶಿಕ್ಷಕರ ಸಾವಿನ ಬಗ್ಗೆ ವಿಜಯವಾಣಿ ವರದಿ ಪ್ರಕಟಿಸಿತ್ತು.