More

    ಗರ್ಭಿಣಿಯರಿಗೆ ಆರೋಗ್ಯ ಮಾಹಿತಿ ನೀಡಿ

    ಎನ್.ಆರ್.ಪುರ: ಆರೋಗ್ಯ ಇಲಾಖೆ ಹಾಗೂ ಗರ್ಭಿಣಿಯರ ನಡುವೆ ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ಸೇತುವೆಯಂತೆ ಕೆಲಸ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಭಾರತಿ ಎಸ್. ರಾಯಣ್ಣನವರ್ ಹೇಳಿದರು.

    ಮಂಗಳವಾರ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಆಶ್ರಯದಲ್ಲಿ ಪ್ರಧಾನ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ ಕಾರ್ಯಕ್ರಮದಡಿ 40 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಗರ್ಭಿಣಿಯರು, ಬಾಣಂತಿಯರಿಗೆ ಆರೋಗ್ಯ ಅರಿವು ಮೂಡಿಸಬೇಕು ಎಂದರು.
    ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯಕುಮಾರ್ ಮಾತನಾಡಿ, ತಾಯಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಬೇಕು ಎಂಬುದೇ ಕಾರ್ಯಕ್ರಮದ ಉದ್ದೇಶ. ಸುರಕ್ಷಿತ ಆರೋಗ್ಯ, ಸುರಕ್ಷಿತ ತಾಯ್ತನ ಎಂಬ ಘೋಷಣೆಯೊಂದಿಗೆ ಗರ್ಭಿಣಿಯರಿಗೆ ಆರೋಗ್ಯದ ಮಾಹಿತಿ ನೀಡಲು ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
    ಸರ್ಕಾರಿ ಆಸ್ಪತ್ರೆ ಹೆರಿಗೆ ತಜ್ಞೆ ಡಾ. ಚಂದ್ರಪ್ರಭಾ ಮಾತನಾಡಿ, ಗರ್ಭಿಣಿಯರು 2 ವಾರಕ್ಕೊಮ್ಮೆ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಂಡು ವೈದ್ಯರು ಸೂಚಿಸಿದ ಮಾತ್ರೆಗಳನ್ನು ಕಾಲ ಕಾಲಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
    ತಾಲೂಕು ಸರ್ಕಾರಿ ಆಸ್ಪತ್ರೆ ಶುಶ್ರೂಷಣಾ ಅಧಿಕಾರಿ ಸೂನಮ್ಯಾಥ್ಯೂ ಮಾತನಾಡಿ, ಗರ್ಭಿಣಿಯರು 3 ತಿಂಗಳ ಒಳಗೆ ತಾಯಿ ಕಾರ್ಡ್ ಮಾಡಿಸಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ತಪಾಸಣೆ ಮಾಡುತ್ತೇವೆ ಎಂದರು.
    ಜೇಸಿ ಅಧ್ಯಕ್ಷ ಎಂ.ಪಿ.ಮನು ಮಾತನಾಡಿ, ಮುಂದಿನ ದಿನಗಳಲ್ಲಿ ಜೇಸಿ ಆರೋಗ್ಯ ಇಲಾಖೆ ಜತೆ ಸೇರಿ ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮ ಹಮ್ಮಿಕೊಳ್ಳುವುದು ಎಂದರು.
    ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ, ಸುಜಾತಾ, ಭಗವಾನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts