More

    ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆ

    ಬೆಂಗಳೂರು: ಹೊಸ ಶಿಕ್ಷಣ ನೀತಿ 2020ರಲ್ಲಿನ ನಿಬಂಧನೆಗಳ ಪ್ರಕಾರ ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಹಾಗೂ ಪ್ರಸ್ತುತ ಮಾತೃಭಾಷೆ/ಸ್ಥಳೀಯ ಭಾಷೆಯಲ್ಲಿ ಲಭ್ಯವಿಲ್ಲದ ವಿಷಯಗಳ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳುವುದು ಅವಶ್ಯ ಎಂದು ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್ ಹೇಳಿದರು.

    ಮಂಗಳವಾರ ನಗರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನ-2021ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಉನ್ನತ ಶಿಕ್ಷಣದಲ್ಲಿ ವಿಶೇಷವಾಗಿ ವಿಜ್ಞಾನ, ವಾಣಿಜ್ಯ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಅನೇಕ ಕೋರ್ಸ್‌ಗಳನ್ನು ಇಂಗ್ಲಿಷ್ ಮಾಧ್ಯಮದ ಮೂಲಕ ಕಲಿಸಲಾಗುತ್ತದೆ, ಈ ಕೋರ್ಸ್‌ಗಳ ಪಠ್ಯಪುಸ್ತಕಗಳು ಮತ್ತು ಅಧ್ಯಯನ ಸಾಮಗ್ರಿಗಳು ಸ್ಥಳೀಯ ಭಾಷೆಗಳಲ್ಲಿ ಲಭ್ಯವಿರುವುದಿಲ್ಲ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತ ಕಾಲದ ಸಮಯದಲ್ಲಿ, ಭಾರತದ ಯಾವುದೇ ವಿದ್ಯಾರ್ಥಿಗಳು ತಮ್ಮ ಮಾತೃಭಾಷೆಯಲ್ಲಿ ಪಠ್ಯ ಪುಸ್ತಕಗಳಿಂದ ವಂಚಿತರಾಗಬಾರದು ಎಂದು ನಾನು ಭಾವಿಸುತ್ತೇನೆ. ತಮ್ಮ ಮಾತೃ ಭಾಷೆ/ಸ್ಥಳೀಯ ಭಾಷೆಯಲ್ಲಿ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಮುಂದಿನ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೊಂಡಿದೆ. ಕರ್ನಾಟಕದಲ್ಲಿ ಈ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮತ್ತು ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅಧಿಕಾರಿಗಳು ಮತ್ತು ರಾಜ್ಯ ವಿಶ್ವವಿದ್ಯಾಲಯಗಳ ಎಲ್ಲಾ ಉಪಕುಲಪತಿಗಳು ಉನ್ನತ ಶಿಕ್ಷಣಕ್ಕಾಗಿ ಪಠ್ಯಪುಸ್ತಕಗಳನ್ನು ಬರೆಯಲು/ಭಾಷಾಂತರಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ತಿಳಿಸಲಾಗಿದೆ. ಮನಸ್ಸಿಟ್ಟು ಮಾಡಿದರೆ ಯಾವುದೇ ಕಾರ್ಯ ಯಶಸ್ವಿಯಾಗಲಿದೆ ಎಂದು ಹೇಳಿದರು.

    ಇದನ್ನೂ ಓದಿ: ಮೊಬೈಲ್​ಫೋನ್ ಕಳೆದುಹೋದರೆ ತಕ್ಷಣ ಹೀಗೆ ಮಾಡಿ; ಕೊರಿಯರ್​ನಲ್ಲಿ ಫೋನ್​ ವಾಪಸ್!

    “ಮಾತೃಭಾಷೆಯಲ್ಲಿ ಶಿಕ್ಷಣ” ಎಂಬ ವಿಷಯ ಕುರಿತು ಕುಲಪತಿಗಳ ಈ ಸಮ್ಮೇಳನದಲ್ಲಿ ಚರ್ಚೆ ನಡೆದಿರುವುದು ಹಾಗೂ ದೇಶದಲ್ಲೇ ಪ್ರಥಮವಾಗಿದೆ. ಇಡೀ ದೇಶದಲ್ಲಿ ಉನ್ನತ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಇದಕ್ಕೆ ವಿಶ್ವವಿದ್ಯಾಲಯಗಳ ಕೊಡುಗೆ ಅಪಾರ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದಲ್ಲೂ ಇಡೀ ದೇಶದಲ್ಲಿ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಮತ್ತು ವಿಶ್ವವಿದ್ಯಾಲಯಗಳಿಗೆ ಅಭಿನಂದಿಸುತ್ತೇನೆ ಎಂದ ಅವರು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ಒದಗಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

    ಭಾಷೆ ಯಾವುದೇ ಇರಲಿ, ಅದನ್ನು ಕಲಿಯಬೇಕು. ಅದನ್ನು ಸಂಪರ್ಕ ಭಾಷೆಯನ್ನಾಗಿ ಮಾಡಬೇಕು. ಆಂಗ್ಲಭಾಷೆ ಕಲಿಯದೇ ಭವಿಷ್ಯವಿಲ್ಲ ಎಂಬ ಪರಿಸ್ಥಿತಿ ಉದ್ಭವವಾಗದಂತೆ ಎಚ್ಚರವಹಿಸುವುದು ಅವಶ್ಯ. ಜರ್ಮನಿ, ಜಪಾನ್, ಫ್ರಾನ್ಸ್, ಚೀನಾ ಸೇರಿದಂತೆ ಕೆಲವು ದೇಶಗಳು ತಮ್ಮ ಮಾತೃಭಾಷೆಯಲ್ಲಿ ಕಾರ್ಯನಿವರ್ಹಿಸುತ್ತಿದ್ದು, ತಂತ್ರಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಂಡಿದೆ. ಇದೇ ರೀತಿ ನಮ್ಮ ದೇಶವು ಮಾತೃಭಾಷೆಯಲ್ಲಿ ಪ್ರಗತಿ ಸಾಧಿಸಬೇಕು ಎಂದರು.

    ಇದನ್ನೂ ಓದಿ: ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ

    ವಿದ್ಯಾರ್ಥಿಗಳಿಗೆ ಸಾಮಾಜಿಕ ಮೌಲ್ಯಗಳನ್ನು ಮನದಟ್ಟು ಮಾಡಿಸುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಮಹತ್ವದ್ದಾಗಿರುತ್ತದೆ. ಎಲ್ಲಾ ವಿಶ್ವವಿದ್ಯಾಲಯಗಳು ಸಾಮಾಜಿಕ ವಿಷಯಗಳನ್ನು ಅಧ್ಯಯನ ಮಾಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಒಟ್ಟಾರೆ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಜೊತೆ ಜೊತೆಗೆ ಉತ್ತಮ ಪರಿಸರ ನಿರ್ಮಾಣ ಮಾಡುವ ಜವಾಬ್ದಾರಿ ಕುಲಪತಿಗಳದಾಗಿರುತ್ತದೆ ಎಂದರು.

    ವಿಶ್ವವಿದ್ಯಾಲಯಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದು, ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಶಿಕ್ಷಣ ಅರಿವು ಮೂಡಿಸುವುದು, ಶಿಕ್ಷಣ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಕಾರ್ಯರೂಪಗೊಳಿಸುವುದು, ಕರ್ತವ್ಯದ ಜೊತೆಗೆ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

    ಪ್ರಾಚೀನ ಕಾಲದಲ್ಲಿ ದೇಶ ವಿಶ್ವಗುರು ಎಂದು ಕರೆಯಲಾಗುತ್ತಿತ್ತು. ಆಯುರ್ವೇದ, ಗಣಿತದಲ್ಲಿ ಮಾಡಿದ ಆವಿಷ್ಕಾರದಿಂದಾಗಿ ವಿಶ್ವಗುರು ಎಂದು ಕರೆಯಲಾಗುತಿತ್ತು. ಎನ್​ಇಪಿ ಮತ್ತೆ ದೇಶವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದರು.

    ಇದನ್ನೂ ಓದಿ: ಗುತ್ತಿಗೆದಾರರ ಸಂಘದಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಎಚ್ಚರಿಕೆ; ವಿವಿಧ ಇಲಾಖೆಗಳಲ್ಲಿ 22,000 ಕೋಟಿ ರೂ. ಮೊತ್ತ ಬಾಕಿ

    ವಿಶ್ವವಿದ್ಯಾಲಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜೊತೆ ವಿಶ್ವವಿದ್ಯಾಲಯಗಳು ಕೈಜೋಡಿಸಬೇಕು. ವಿಶ್ವವಿದ್ಯಾಲಯದ ಆಡಳಿತಾತ್ಮಕ ಅನುಭವಗಳೊಂದಿಗೆ ಕುಲಪತಿಗಳು ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು. ಉನ್ನತ ಶಿಕ್ಷಣವನ್ನು ಸಮಾಜಕ್ಕೆ ಸಮಾನವಾಗಿ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತರಾಗಿರಬೇಕು ಎಂದು ತಿಳಿಸಿದರು.

    ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆ

    ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಸಾಧ್ಯವಿರುವಂತಹ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಮಸ್ಯೆಗಳನ್ನು ಬಗೆಹರಿಸಬೇಕು. ಸರ್ಕಾರದ ಮಟ್ಟದಲ್ಲಾದರೆ, ಸರ್ಕಾರಕ್ಕೆ ಪತ್ರ ಬರೆದು, ರಾಜ್ಯಪಾಲರಿಗೆ ಪ್ರತಿ ಸಲ್ಲಿಸಿ. ಕಾನೂನಾತ್ಮಕವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು. ಯಾವುದೇ ಸಮಸ್ಯೆಗಳಿದ್ದರೆ, ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತರುವ ಮೂಲಕ ತ್ವರಿತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

    ಇದನ್ನೂ ಓದಿ: ತಾತನ ಮರಣದ ಬೆನ್ನಿಗೇ ಮೊಮ್ಮಗನಿಗೂ ಸಾವು; ಮಾವನ ಕಣ್ಣೆದುರೇ ಪ್ರಜ್ಞೆ ತಪ್ಪಿ ಬಿದ್ದಿದ್ದ 17 ವರ್ಷದ ಹುಡುಗ!

    ಸಭೆಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ವಿಶ್ವವಿದ್ಯಾನಿಲಯಗಳು ಮತ್ತು ಅವರ ಸಾಧನೆಗಳ ಕುರಿತು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ಅನುಷ್ಠಾನದ ಸಮಯದಲ್ಲಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಸವಾಲುಗಳನ್ನು ಜಯಿಸಲು ವಿಶ್ವವಿದ್ಯಾಲಯಗಳ ಪ್ರಯತ್ನ ಮತ್ತು ಎನ್​ಇಪಿ-2020ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಾಗೂ ಮಾತೃಭಾಷೆಯಲ್ಲಿ ಪಠ್ಯಕ್ರಮಗಳ ಬಗ್ಗೆ ಸರ್ಕಾರಕ್ಕೆ ಸಲಹೆಗಳನ್ನು ಪ್ರಸ್ತುತಿ ಪಡಿಸಿದರು ಎಂದು ಹೇಳಿದರು.

    ಸಭೆಯಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್​​ನಿಂದ ಹೊರತರಲಾಗಿರುವ ಕನ್ನಡ ಆವೃತ್ತಿಯ “ಆರ್ಥಿಕ ಸಾಕ್ಷರತೆ ಮತ್ತು ಜಾಗೃತ ಹೂಡಿಕೆ” ಕೈಪಿಡಿಯನ್ನು ಗೌರವಾನ್ವಿತ ರಾಜ್ಯಪಾಲರು ಬಿಡುಗಡೆ ಮಾಡಿದರು.

    ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ. ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಹತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ; ಫ್ರೆಂಡ್ ಜತೆ ಮಾತನಾಡುತ್ತಲೇ ಕುಸಿದು ಬಿದ್ದು ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts