ಗುಂಡ್ಲುಪೇಟೆ ಅಭಿವೃದ್ಧಿಗೆ ಮುಕ್ತ ಸಲಹೆಗಳನ್ನು ನೀಡಿ

blank

ಗುಂಡ್ಲುಪೇಟೆ: ಬೆಳೆಯುತ್ತಿರುವ ಪಟ್ಟಣದ ಅಭಿವೃದ್ಧಿ ಮತ್ತು ಕುಂದುಕೊರತೆಗಳ ನಿವಾರಣೆಗೆ ಸಾರ್ವಜನಿಕರು ಮುಕ್ತ ಸಲಹೆ ನೀಡಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

blank

ಗುರುವಾರ ಪಟ್ಟಣದ ಶಿಕ್ಷಣ ಇಲಾಖೆಯ ಜ್ಞಾನಭವನದಲ್ಲಿ ಆಯೋಜಿಸಿದ್ದ ಪಟ್ಟಣದ ಅಭಿವೃದ್ಧಿಗೆ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮಾಂತರ ಪ್ರದೇಶಗಳಿಗೆ ಹೋಲಿಸಿದರೆ ಪಟ್ಟಣದಲ್ಲಿ ಕಸ ವಿಲೇವಾರಿ, ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಸಮಸ್ಯೆಗಳಿವೆ. ಹೊಸ ಹೊಸ ಬಡಾವಣೆಗಳಲ್ಲಿ ಮನೆಗಳು ನಿರ್ಮಾಣವಾಗುತ್ತಿದ್ದು, ಎಲ್ಲ ಕಡೆಗಳಿಗೂ ಮೂಲ ಸೌಕರ್ಯ ಕಲ್ಪಿಸಬೇಕಾಗಿದೆ. ಗೃಹ ನಿರ್ಮಾಣ ಮಂಡಳಿಯ ಅನುದಾನದಲ್ಲಿ ಮನೆಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು. ಹಲವು ಕಡೆಗಳಲ್ಲಿ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಮಾಡಬೇಕಾಗಿದೆ. ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಕೋರ್ಟ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ನಂಜನಗೂಡಿನಲ್ಲಿ ಮಾಡಿರುವಂತೆ ವಾಹನಗಳ ಪಾರ್ಕಿಂಗ್ ಸೇರಿದಂತೆ ಎಲ್ಲ ಆಹಾರ ಪದಾರ್ಥಗಳೂ ಒಂದೆಡೆ ಸಿಗುವಂತೆ ಮಾಡಬೇಕಾಗಿದ್ದು ಸಾರ್ವಜನಿಕರು ಇದಕ್ಕೆ ಸೂಕ್ತ ಸ್ಥಳವನ್ನು ಸಲಹೆ ಮಾಡಬಹುದು ಎಂದು ಹೇಳಿದರು.

ಹಿಂದೆ ಬಡಾವಣೆ ನಿರ್ಮಿಸಿದವರು ಮಾಡಿದ ತಪ್ಪಿಗೆ ನಿವೇಶನ ಕೊಂಡವರು ಶಿಕ್ಷೆ ಅನುಭವಿಸುವಂತಾಗಿದೆ ಎಂದು ವಿವಿಧ ಬಡಾವಣೆಯ ನಿವಾಸಿಗಳು ದೂರಿದರು.

ಸದ್ಯ ಸರ್ಕಾರ ಬಿ ಖಾತೆ ಮಾಡಿಕೊಳ್ಳಲು ಅವಕಾಶ ನೀಡಿದ್ದು ಇದನ್ನು ಬಳಸಿಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ಹೇಳಿದರು.

ನಿವೃತ್ತ ಶಿಕ್ಷಕ ಬ್ರಹ್ಮಾನಂದ ಮಾತನಾಡಿ, ಪಟ್ಟಣದ ದೊಡ್ಡ ಬಡಾವಣೆಯಾದ ಕೆ.ಎಸ್.ನಾಗರತ್ನಮ್ಮ ಬಡಾವಣೆಗೆ ರಸ್ತೆ, ಚರಂಡಿ, ಕಸವಿಲೇವಾರಿ ಮುಂತಾದ ಮೂಲ ಸೌಕರ್ಯಗಳಿಲ್ಲ ಎಂದು ದೂರಿದರು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ನಿಧಿಯಿಂದ ಹೆಚ್ಚಿನ ಅನುದಾನ ತಂದು ಬಡಾವಣೆಯನ್ನು ಅಭಿವೃದ್ಧಿಗೊಳಿಸುವುದಾಗಿ ಗಣೇಶ್ ಪ್ರಸಾದ್ ಉತ್ತರಿಸಿದರು.

ಮಹಿಳಾ ಸಂತ್ವನ ಸಂಘಟನೆಯ ಸರಸ್ವತಿ ಮಾತನಾಡಿ, ಪಟ್ಟಣದ ಮುಖ್ಯರಸ್ತೆ ಹಾಗೂ ನಾನಾ ಬಡಾವಣೆಗಳಲ್ಲಿ ಅನಧಿಕೃತ ಪಾರ್ಕಿಂಗ್ ಹಾಗೂ ರಸ್ತೆಗಳನ್ನು ಅತಿಕ್ರಮಿಸಿ ವರ್ಕ್‌ಶಾಪ್ ಮಾಡಿಕೊಂಡಿದ್ದಾರೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಪಟ್ಟಣಕ್ಕೆ ಮತ್ತೊಂದು ಸಂಚಾರ ಪೊಲೀಸ್ ಠಾಣೆ ಆರಂಭಿಸಲು ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದರು.

ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರವೇ ಆರಂಭಿಸಲಾಗುವುದು. ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸಹಕರಿಸಿ ಎಂದು ಮನವಿ ಮಾಡಿದರು.

ವರ್ತಕರ ಸಂಘದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ರಸ್ತೆಯಲ್ಲಿ ಎಲ್ಲ ವ್ಯಾಪಾರ ವಹಿವಾಟುಗಳು ನಡೆಯುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಆದ್ದರಿಂದ ಪುರಸಭೆಯು ವಾಣಿಜ್ಯೋದ್ಯಮಿಗಳಿಗೆ ಪ್ರತ್ಯೇಕ ಸ್ಥಳ ಗುರ್ತಿಸಿ ಒದಗಿಸುವ ಮೂಲಕ ವರ್ತಕರು ಮತ್ತು ಗ್ರಾಹಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸರ್ಕಲ್ ಇನ್ಸ್‌ಪೆಕ್ಟರ್ ಜಯಕುಮಾರ್ ಮಾತನಾಡಿ, ಹೆದ್ದಾರಿಯಲ್ಲಿ ಬ್ಯಾಂಕ್‌ಗಳ ಮುಂದೆ ಹಾಗೂ ರಸ್ತೆ ಬದಿಗಳಲ್ಲಿ ವಾಹನಗಳ ನಿಲುಗಡೆ ಮಾಡದಂತೆ ಪ್ರತಿ ದಿನವೂ ಎಚ್ಚರಿಕೆ ನೀಡಲಾಗುತ್ತಿದೆ. ಸದ್ಯದಲ್ಲಿಯೇ ಬೋರ್ಡ್ ಅಳವಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇಂತಹ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳ ಮಾಲೀಕರಿಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕಾಡಾ ಮಾಜಿ ಅಧ್ಯಕ್ಷ ಎಸ್.ಎಸ್.ನಂಜಪ್ಪ, ಬಿಇಒ ಸ್ವಾಮಿ, ಪುರಸಭೆ ಅಧ್ಯಕ್ಷ ಮಧುಸೂದನ್, ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಮುಖ್ಯಾಧಿಕಾರಿ ವಸಂತಕುಮಾರಿ, ಸದಸ್ಯರಾದ ಶಶಿಧರ, ಕಪ್ಪಣ್ಣ, ಕುಮಾರ್, ರಾಜಗೋಪಾಲ್, ಕಿರಣ್ ಸೇರಿದಂತೆ ಹಲವರು ಇದ್ದರು.

 

 

Share This Article
blank

ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರ ನಡುವೆ ಹೃದಯಾಘಾತಗಳು ಹೆಚ್ಚಾಗಿ ಸಂಭವಿಸುತ್ತವೆ! ಯಾಕೆ ಗೊತ್ತಾ? heart attacks

heart attacks: ಪ್ರಪಂಚದಾದ್ಯಂತ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಬೆಳಿಗ್ಗೆ 6 ರಿಂದ ಮಧ್ಯಾಹ್ನ 12…

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

blank