More

    ಕನ್ನಡಕ್ಕೆ ಪ್ರಾಶಸ್ತ್ಯ ಕೊಡಿ -ಎನ್. ಪರಶುರಾಮನಗೌಡ ಹೇಳಿಕೆ -ವಿಶೇಷ ಉಪನ್ಯಾಸ ಕಾರ್ಯಕ್ರಮ

    ದಾವಣಗೆರೆ: ಪ್ರತಿಯೊಬ್ಬರೂ ಮಾತೃಭಾಷೆ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ನೂತನ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಪರಶುರಾಮನಗೌಡ ಹೇಳಿದರು.
    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಕರ್ನಾಟಕ ಸಂಭ್ರಮ-50 ಹಾಗೂ ವಿಶ್ವ ಮಾನವ ದಿನಾಚರಣೆ ಪ್ರಯುಕ್ತ ನಗರದ ಕುವೆಂಪು ಕನ್ನಡ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ರಾಜಧಾನಿ ಬೆಂಗಳೂರಿಗೆ ಹೋದರೆ ಕನ್ನಡ ಬಳಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ಬೇರೆ ರಾಜ್ಯಕ್ಕೆ ಹೋಗಿರುವಂತೆ ಭಾಸವಾಗುತ್ತದೆ. ಅಲ್ಲಿ ಕನ್ನಡ ನಾಮಫಲಕ್ಕಾಗಿ ಚಳವಳಿಯೇ ನಡೆದಿರುವುದು ವಿಷಾದಕರ ಸಂಗತಿ ಎಂದು ತಿಳಿಸಿದರು.
    ನೆರೆಯ ತಮಿಳುನಾಡಿನಲ್ಲಿ ತಮಿಳು ಬಿಟ್ಟರೆ ಬೇರೆ ಭಾಷೆಯನ್ನೇ ಬಳಸುವುದಿಲ್ಲ. ಅವರಂತೆ ನಾವು ಸಹ ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯದವರೊಂದಿಗೆ ಕನ್ನಡದಲ್ಲೇ ಮಾತನಾಡಿ ನಮ್ಮ ಭಾಷೆ ಕಲಿಸಬೇಕು. ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಬೇಕು. ಆದರೆ, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.
    ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ.ಎಂ. ಮಂಜಣ್ಣ ಕುವೆಂಪು ಬದುಕು-ಬರಹ ಕುರಿತು ಉಪನ್ಯಾಸ ನೀಡಿ, ಸಮಾಜದಲ್ಲಿನ ಜಾತಿ ನಿರಾಕರಣೆ ಜತೆಗೆ ಅಸಮಾನತೆ ತೊಡೆದು ಹಾಕುವುದು ಕುವೆಂಪು ಅವರ ಪ್ರಮುಖ ಆಶಯವಾಗಿತ್ತು. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗೌರವಿಸಿ ಮನುಜ ಮತ ವಿಶ್ವ ಪಥ ಸಂದೇಶ ಸಾರಿದ್ದಾರೆ ಎಂದು ತಿಳಿಸಿದರು.
    ಸಾಮಾಜಿಕ ಕಂದಾಚಾರ, ಧಾರ್ಮಿಕ ಮತಾಂಧತೆ ಹಾಗೂ ಸಾಂಸ್ಕೃತಿಕ ಅಶ್ಲೀಲತೆ ಕಾಣುತ್ತಿರುವ ಇಂದಿನ ದಿನಮಾನಗಳಲ್ಲಿ ಕುವೆಂಪು, ಬುದ್ಧ, ಬಸವಣ್ಣ, ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ವಿಚಾರಧಾರೆಗಳ ಮೂಲಕ ಉತ್ತರ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.
    ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ‘ಅವಾಂತರ – ಹಾಸ್ಯ ಪ್ರಸಂಗಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ವೈವಿಧ್ಯಮಯ ಕೃತಿಗಳನ್ನು ರಚಿಸುವ ಮೂಲಕ ನಾಡಿನ ಸಾಹಿತ್ಯ ಲೋಕಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
    ಕೃತಿಕಾರ ಬಿ.ಎಸ್. ಸಿದ್ದೇಶ್, ಸ್ತ್ರೀ ರೋಗ ತಜ್ಞ ಡಾ.ಬಿ. ಹಾಲೇಶ್ ಇದ್ದರು. ಕಸಾಪ ಗೌರವ ಕಾರ್ಯದರ್ಶಿ ಬಿ. ದಿಳ್ಳೆಪ್ಪ ಸ್ವಾಗತಿಸಿದರು. ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯರಿ ಪ್ರಾಸ್ತಾವಿಕ ಮಾತನಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts