More

    ಪಠ್ಯೇತರ ಚಟುವಟಿಕೆಗಳಿಗೂ ಅದ್ಯತೆ ನೀಡಿ

    ಕಡೂರು: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಮಹತ್ವದ್ದು ಎಂದು ಜಿಪಂ ಮಾಜಿ ಸದಸ್ಯ ಶರತ್‌ಕೃಷ್ಣಮೂರ್ತಿ ಹೇಳಿದರು. ತಾಲೂಕಿನ ಅಣ್ಣೀಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಗೌರವಿಸಿ ಮಾತನಾಡಿ, ಇಂದಿನ ಶಿಕ್ಷಣದ ಕಲಿಕೆ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೂ ಮಕ್ಕಳು ಹೆಚ್ಚಿನ ಆಸಕ್ತಿವಹಿಸಲು ಪಾಲಕರು ಪ್ರೋತ್ಸಾಹ ನೀಡಬೇಕು. ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದರು. ಬಿಇಒ ಆರ್. ಸಿದ್ದರಾಜುನಾಯ್ಕ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಹು ಮುಖ್ಯವಾಗಲಿದೆ. ಗ್ರಾಮೀಣ ಭಾಗದ ಮಕ್ಕಳು ಕಲಿಕೆಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಲು ಶಿಕ್ಷಕರು ಹೆಚ್ಚಿನ ನಿಗಾವಹಿಸಬೇಕಿದೆ. ಉತ್ತಮ ಫಲಿತಾಂಶದಿಂದ ಶಾಲೆ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು. ಅಣ್ಣೀಗೆರೆ ಗ್ರಾಪಂ ಅಧ್ಯಕ್ಷ ತಮ್ಮಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರಪ್ಪ , ಗುಜ್ಜೇನಹಳ್ಳಿ ತಿಪ್ಪೇಶ್, ಎ.ಜಿ.ಗಿರೀಶ್, ಸಾಣೇಹಳ್ಳಿ ಆರಾಧ್ಯ, ಮುಖ್ಯಶಿಕ್ಷಕಿ ಶ್ರೀವಳ್ಳಿ, ಯುವಜನ ಸೇವಾ ಕ್ರೀಡಾಧಿಕಾರಿ ಮುರುಳಿಧರ್, ಧನಪಾಲ್ನಾಯ್ಕ್, ಪ್ರೇಮ್ಕುಮಾರ್, ರವೀಂದ್ರ, ಪ್ರಭಾಕರ್, ತಿಪ್ಪೇಶ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts