More

    ಬಜೆಟ್‌ನಲ್ಲಿ ಮೀನುಗಾರಿಕೆಗೆ ಆದ್ಯತೆ, ಕರಾವಳಿ ನಿಯೋಗದ ಮನವಿಗೆ ಮುಖ್ಯಮಂತ್ರಿ ಭರವಸೆ

    ಮಂಗಳೂರು: ಮೀನುಗಾರರು ಮತ್ಸೃಕ್ಷಾಮದಿಂದ ಆರ್ಥಿಕ ಸಮಸ್ಯೆಗೆ ಒಳಗಾಗಿದ್ದು, ಮುಂದಿನ ಬಜೆಟ್‌ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರಾವಳಿ ಮೀನುಗಾರು ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

    ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದ.ಕ. ಪರ್ಸೀನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಶಶಿಕುಮಾರ್, ರಾಜ್ಯ ಉಪಾಧ್ಯಕ್ಷ ನವೀನ್ ಬಂಗೇರ, ಮಾಜಿ ಅಧ್ಯಕ್ಷ ಮೋಹನ್ ಬೆಂಗ್ರೆ, ಮಂಗಳೂರು ಟ್ರಾಲ್‌ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ರಾಜೇಶ್ ಉಳ್ಳಾಲ್ ನಿಯೋಗದಲ್ಲಿದ್ದರು.

    ಮೀನುಗಾರರಿಗೆ ಪ್ರಸ್ತುತ ಸಿಗುತ್ತಿರುವ ರಿಯಾಯಿತಿ ದರದ ಡೀಸೆಲ್ 9 ಸಾವಿರ ಲೀಟರ್‌ನಿಂದ 12 ಸಾವಿರಕ್ಕೆ ಹೆಚ್ಚಿಸಬೇಕು. ಮೂರನೇ ಹಂತದ ಮೀನುಗಾರಿಕಾ ಜೆಟ್ಟಿ ನಿರ್ಮಾಣ ಮಾಡಬೇಕು. ಡ್ರೆಜ್ಜಿಂಗ್ ಮಾಡದೇ ಇರುವುದರಿಂದ ದೋಣಿಗಳು ಅವಘಡಕ್ಕೀಡಾಗುತ್ತಿದ್ದು, ಡ್ರೆಜ್ಜಿಂಗ್ ನಡೆಸಬೇಕು. ಬಜೆಟ್‌ನಲ್ಲಿ ಮೀನುಗಾರರಿಗೆ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ನಿಯೋಗ ಮನವಿ ಮಾಡಿದೆ.
    ಮೀನುಗಾರಿಕಾ ಸಚಿವ ಎಸ್.ಅಂಗಾರ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ನಿಯೋಗ ಮನವಿ ಸಲ್ಲಿಸಿದೆ. ಕರಾವಳಿಯ ಶಾಸಕರು ಶುಕ್ರವಾರ ಮತ್ತೆ ಸಿಎಂ ಅವರನ್ನು ಭೇಟಿ ಮಾಡಿ ಮೀನುಗಾರಿಕೆಗೆ ಸಂಬಂಧಿಸಿ ಚರ್ಚೆ ನಡೆಸಲಿದ್ದಾರೆ ಎಂದು ಮೋಹನ್ ಬೆಂಗ್ರೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts