More

    ಜನಸಂಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯ ನೀಡಿ, ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ರವೀಂದ್ರ ಸೂಚನೆ

    ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳ ಕುರಿತು ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

    ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ 15 ಅಂಶ ಕಾರ್ಯಕ್ರಮದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

    ಅಲ್ಪಸಂಖ್ಯಾತ ಸಮುದಾಯಗಳನ್ನು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಪೂರಕವಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನ ನೀಡಬೇಕು. ಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆ ತಪುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

    ಸುದೀರ್ಘ ಚರ್ಚೆ: ಅಲ್ಪಸಂಖ್ಯಾತರ ಮಕ್ಕಳಿಗಾಗಿ ಅಂಗನವಾಡಿ ಮೂಲಕ ಪೌಷ್ಟಿಕ ಆಹಾರ ವಿತರಣೆ, ಸಾಲ ಸೌಲಭ್ಯ, ವಿದ್ಯಾರ್ಥಿ ವೇತನ, ಸ್ವ ಉದ್ಯೋಗ ಕೈಗೊಳ್ಳಲು ತರಬೇತಿ, ನಾಗರಿಕ ಸೇವೆಗಳ ತರಬೇತಿ, ವಸತಿ ಸೌಲಭ್ಯ, ಕೃಷಿ, ತೋಟಗಾರಿಕೆ, ಉದ್ಯೋಗಿನಿ ಯೋಜನೆ, ವೃತ್ತಿ ಕೌಶಲ ತರಬೇತಿ, ಸ್ವಾವಲಂಬನೆ, ಅರಿವು, ಶ್ರಮಶಕ್ತಿ, ಸೂಕ್ಷ್ಮ ಸಾಲ ಯೋಜನೆ ಸೇರಿ ಹಲವು ಕಾರ್ಯಕ್ರಮಗಳ ಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.

    ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭವ್ಯಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಪಾ ಜಿ.ರಾಯ್ಕರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts