More

    ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ

    ವಿಜಯಪುರ: ಬಾಲಕಿಯರಿಗೆ ಪ್ರತಿನಿತ್ಯ ಶಿಕ್ಷಣ ನೀಡುವ ಜತೆಗೆ ಸ್ವಾವಲಂಬಿ ಹಾಗೂ ಸ್ವಾಭಿಮಾನಿಯಾಗುವಂತೆ, ಸಂಸ್ಕಾರ, ಮೈಗೂಡಿಸುವ ಶಿಕ್ಷಣ ಒದಗಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ.ಹೊಸಮನಿ ಹೇಳಿದರು.

    ನಗರದ ಡಿ.ಎನ್.ದರಬಾರ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ‘ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ’ ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಸ್ವಾವಲಂಬಿ ಆಗಲು ಸೋಮವಾರ ಹಮ್ಮಿಕೊಂಡಿದ್ದ ಪ್ರೇರಣಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಗೀತಾ ಗುಪ್ತರಗಿಮಠ ಮಾತನಾಡಿ, ಬಾಲಕಿಯರು ಶಿಕ್ಷಣ ಪಡೆಯುವುದರ ಜೊತೆಗೆ ತಮ್ಮ ವ್ಯಕ್ತಿತ್ವ ಹಾಗೂ ಸಾಮಾಜಿಕ ಸ್ವಾಸ್ಥೃವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಬಾಲ್ಯ ವಿವಾಹ ತಡೆಗಟ್ಟಲು ಜಾಗೃತಿ ಮೂಡಿಸಬೇಕು ಎಂದರು.

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಯಲ್ಲಮ್ಮ ಪಡೆಸೂರ ಮಾತನಾಡಿ, ವಿದ್ಯಾರ್ಥಿನಿಯರು ಬಹುದೊಡ್ಡ ಕನಸುಗಳನ್ನು ಇಟ್ಟುಕೊಂಡು ಪ್ರತಿಕ್ಷಣ ಕನಸು ಇಡೇರಿಕೆಗಾಗಿ ಪ್ರಯತ್ನಿಸುತ್ತಿಬೇಕು ಎಂದು ತಿಳಿಸಿದರು.

    ಅಧ್ಯಕ್ಷತೆ ವಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ.ಗುಳೇದಗುಡ್ಡ, ನೊಡಲ್ ಅಧಿಕಾರಿ ಡಿ.ಜಿ.ಚಾಳಿಕಾರ ಮಾತನಾಡಿದರು. ವಿಷಯ ಪರಿವೀಕ್ಷಕ ಸಿ.ಎಚ್.ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಡಿ.ಮೊಸಲಗಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts