More

    ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿಕೆ

    ಬೇಲೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಸೋಮವಾರ ತಹಸೀಲ್ದಾರ್ ಎಂ.ಮಮತಾ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಗುಲಾಬಿ ಹೂ ನೀಡುವ ಮೂಲಕ ಶುಭ ಕೋರಿ ಧೈರ್ಯ ತುಂಬಿದರು.

    ಪಟ್ಟಣದ ಸರ್ವೋದಯ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದ ತಹಸೀಲ್ದಾರ್ ಎಂ.ಮಮತಾ, ಎಸ್ಸೆಸ್ಸೆಲ್ಸಿ ಪರೀಕ್ಷೆ ಎಂಬುದು ಒಂದು ಮುಖ್ಯವಾದ ಮೆಟ್ಟಿಲು. ಇದನ್ನು ದಾಟುವ ಸುಸಂದರ್ಭ ಈಗ ಬಂದಿದೆ. ಯಾರೂ ಪರೀಕ್ಷೆ ಎಂಬ ಭಯವಿಲ್ಲದೆ ಪ್ರಶ್ನೆಗಳನ್ನು ಅರ್ಥೈಸಿಕೊಂಡು ಬರೆಯಬೇಕು ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಮಾತನಾಡಿ, ಪರೀಕ್ಷೆಯನ್ನು ಪ್ರೀತಿಸಿ, ಪ್ರೀತಿಯಿಂದ ಬರೆಯಬೇಕು. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದರು.

    ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳಿದ್ದು, ಇಲ್ಲಿ 1976 ವಿದ್ಯಾರ್ಥಿಗಳು ಪರೀಕ್ಷೆ ಬರೆಯ ಬೇಕಾಗಿತ್ತು. ಆದರೆ ಮೊದಲ ದಿನ ಕನ್ನಡ ಪರೀಕ್ಷೆಗೆ 1970 ವಿದ್ಯಾರ್ಥಿಗಳು ಹಾಜರಿದ್ದು, 6 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಇಸಿಒ ಗೋಪಾಲ್, ಸರ್ವೋದಯ ವಿದ್ಯಾ ಸಂಸ್ಥೆ ಅಧ್ಯಕ್ಷ ಪ್ರಕಾಶ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts