More

    ನೇಹಾ ಹಿರೇಮಠ ಹತ್ಯೆ ಮಾಡಿದವನಿಗೆ ಕಠಿಣ ಶಿಕ್ಷೆ ವಿಧಿಸಿ

    ಸೊರಬ: ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಹತ್ಯೆ ಮಾಡಿದ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಸಿ ತಾಲೂಕು ಬಿಜೆಪಿ ಮಂಡಲ ಹಾಗೂ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ಪುರಸಭೆ ಮುಂಭಾಗ ಪ್ರತಿಭಟನೆ ನೆಡೆಸಿದರು.

    ಯುವ ಮೋರ್ಚಾ ತಾಲೂಕು ಅಧ್ಯಕ್ಷ ರವಿ ಮಾವಿನಬಳ್ಳಿ ಕೊಪ್ಪ ಮಾತನಾಡಿ, ಕಾಲೇಜಿಗೆ ನುಗ್ಗಿ ನೇಹಾ ಅವರನ್ನು ಒಂಬತ್ತು ಬಾರಿ ಇರಿದು ಕೊಲೆ ಮಾಡಿರುವುದು ಅತ್ಯಂತ ಘೋರ ಕೃತ್ಯ. ಏಕಾಏಕಿ ಕಾಲೇಜು ಆವರಣ ಪ್ರವೇಶಿಸಿ ಕೊಲೆ ಮಾಡುವ ವಾತವರಣ ನಿರ್ಮಾಣಗೊಂಡಿರುವುದು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ಅಪರಾಧಿಗಳಿಗೆ ಕಾನೂನಿನ ಮೇಲೆ ಭಯ ಇಲ್ಲದಂತಾಗಿದೆ ಎಂದು ದೂರಿದರು.
    ಹಿಂದು ಕಾರ್ಯಕರ್ತರು, ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದ್ದು, ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಕರಣ ಕುರಿತು ಪೊಲೀಸರು ಕೊಡಲೇ ತನಿಖೆ ನಡೆಸಿ ಅಪರಾಧಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಈ ಮೂಲಕ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
    ಬಿಜೆಪಿ ಮಂಡಲ ಅಧ್ಯಕ್ಷ ಟಿ.ಪ್ರಕಾಶ್ ಮಾತನಾಡಿ, ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಬಿಜೆಪಿ ಬಲವಾಗಿ ಖಂಡನೆ ಮಾಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಮಹಿಳೆ ಸೇರಿದಂತೆ ರಾಜ್ಯದ ಜನತೆಗೆ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಹತ್ಯೆ ಮಾಡಿದ ಆರೋಪಿಗೆ ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲವ್ ಜಿಹಾದ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ಇನ್ನೊಂದು ಕಡೆ ಹನುಮಾನ್ ಚಾಲೀಸ ಹೇಳಿದವರ ಅಂಗಡಿಗಳ ಮೇಲೆ ಹಾಗೂ ಜಯ ಶ್ರೀರಾಮ ಎನ್ನುವ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಪ್ರಕರಣ ಕುರಿತು ಗೃಹ ಸಚಿವರು ನೀಡಿರುವ ಹೇಳಿಕೆಯು ಹಾಸ್ಯಾಸ್ಪದವಾಗಿದೆ ಎಂದರು.
    ಬಿಜೆಪಿ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ಹೊಳಿಯಮ್ಮ, ಪ್ರಮುಖರಾದ ಭಾಗ್ಯಶ್ರೀ, ಗೌರಮ್ಮ, ಆಶಾ, ರತ್ನಮ್ಮ, ಮನಸ್ವಿನಿ, ಜಯಲಕ್ಷ್ಮೀ, ಸಂಜಯ್ ಗೌಡ, ಜಾನಕಪ್ಪ, ಆಶಿಕ್, ಮಧುರಾಯ್ ಶೇಟ್, ಸುಧೀರ್ ಪೈ, ಲಿಂಗರಾಜ್, ಪ್ರಸನ್ನ ಶೇಟ್, ಮಂಜಣ್ಣ, ಬಸವರಾಜ್, ಗುರುಮೂರ್ತಿ, ಸುರೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts