More

    ವಿದ್ಯಾರ್ಥಿನಿ ಹತ್ಯೆಗೈದವನಿಗೆ ಉಗ್ರ ಶಿಕ್ಷೆ ನೀಡಿ

    ರಾಯಚೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಲವ್ ಜಿಹಾದ್ ಕಾರಣಕ್ಕಾಗಿ ಭೀಕರವಾಗಿ ಹತ್ಯೆ ಮಾಡಿದ ಯಾಜ್‌ಗೆ ಉಗ್ರ ಶಿಕ್ಷೆ ವಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಎಬಿವಿಪಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಜ್ಞಾನ ದೇಗುಲದಲ್ಲಿ ವಿದ್ಯಾರ್ಥಿನಿಯನ್ನು ಭೀಕರವಾಗಿ ಹತ್ಯೆ ಮಾಡಿರುವುದು ವಿದ್ಯಾರ್ಥಿ ಸಮೂಹದಲ್ಲಿ ಭಯದ ವಾತಾವರಣ ಮೂಡಿಸಿದೆ ಎಂದು ದೂರಿದರು.
    ನೇಹಾ ಹಿರೇಮಠಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದದ ಯಾಜ್ ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾಲೇಜಿನಲ್ಲಿ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಆತನ ಕ್ರೂರ ಮನಸ್ಥಿತಿಯನ್ನು ತೋರಿಸುತ್ತದೆ. ಈ ಘಟನೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.
    ಕೂಡಲೇ ಈ ಕುರಿತು ಸೂಕ್ತ ತನಿಖೆ ನಡೆಸಿ ಯಾಜ್‌ಗೆ ಉಗ್ರ ಶಿಕ್ಷೆಗೆ ಗುರಿ ಪಡಿಸುವುದರ ಜತೆಗೆ ಆತನಿಗೆ ಸಹಕರಿಸಿ ಇತರರನ್ನು ಬಂಸಬೇಕು. ರಾಜ್ಯದ ಕಾಲೇಜು ಕ್ಯಾಂಪಸ್‌ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ, ಪದಾಕಾರಿಗಳಾದ ಮೋಹನ ಹೂಗಾರ, ಪಾಂಡು ಮೋರೆ, ನಿಕೇತನ, ರಂಗನಾಥ, ನಿತಿನ್, ಸಾಗರ, ನವೀನ್, ಭೀಮೇಶ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts