ಮೂಡಿಗೆರೆ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಎದುರಿನ ಖಾಲಿ ಜಾಗವನ್ನು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನೆಗೆ ನೀಡಬೇಕು ಎಂದು ಒತ್ತಾಯಿಸಿ ಪ.ಜಾತಿ, ಪಂಗಡ ಹಿತರಕ್ಷಣಾ ಒಕ್ಕೂಟದ ಸದಸ್ಯರು ಪಟ್ಟಣ ಪಂಚಾಯಿತಿ ಹಾಗೂ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಒಕ್ಕೂಟದ ಪದಾಧಿಕಾರಿ ಲೋಕವಳ್ಳಿ ರಮೇಶ್ ಮಾತನಾಡಿ, ಸೂಕ್ತ ಸ್ಥಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಲು 2022 ಜು.30 ರಂದು ಪಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೆ 2023 ಜೂನ್ 13ರಂದು ನಡೆದ ತಾಲೂಕು ಮಟ್ಟದ ಕುಂದು ಕೊರತೆ ಸಭೆಯಲ್ಲಿ ತಹಸಿಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಎರಡು ಕಡೆ ಕೈಗೊಂಡ ನಿರ್ಣಯ ನೆನಗುದಿಗೆ ಬಿದ್ದಿದ್ದದೆ ಎಂದು ದೂರಿದರು.
ಬಸ್‌ನಿಲ್ದಾಣ ಮುಂಭಾಗದಲ್ಲಿ ಖಾಲಿ ಜಾಗದಲ್ಲಿ ಪುತ್ಥಳಿ ಪ್ರತಿಷ್ಠಾಪಿಸಲಾಗಿತ್ತು. ಅಧಿಕಾರಿಗಳು ಸೂಕ್ತ ಜಾಗ ನೀಡುವ ಭರವಸೆ ನೀಡಿ ತೆರವುಗೊಳಿಸುವಂತೆ ಮನವಿ ಮಾಡಿದ್ದರಿಂದ ಕಳೆದವಾರ ಪ್ರತಿಷ್ಠಾಪಿಸಿದ್ದ ಪುತ್ಥಳಿಯನ್ನು ತೆರವುಗೊಳಿಸಲಾಗಿದೆ. ಅಂಬೇಡ್ಕರ್ ಭವನ ನಿರ್ಮಿಸಲು 15 ವರ್ಷದಿಂದ ಜಾಗ ಗುರುತಿಸಲು ತಾಲೂಕು ಆಡಳಿತ ವಿಫಲವಾಗಿದೆ. ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನೆಗೆ ಕೂಡಲೇ ಜಾಗ ಗುರುತಿಸಬೇಕು ಎಂದು ಒತ್ತಾಯಿಸಿದರು.
ಪ.ಜಾತಿ, ಪಂಗಡ ಹಿತರಕ್ಷಣಾ ಒಕ್ಕೂಟದ ತಾಲೂಕು ಅಧ್ಯಕ್ಷ ದೇಜಪ್ಪ, ಪಪಂ ಉಪಾಧ್ಯಕ್ಷ ಹೊಸಕೆರೆ ರಮೇಶ್, ಮುಖಂಡರಾದ ಸಿದ್ದೇಶ್, ಬಿ.ಎಂ.ಶಂಕರ್, ಶಿವು, ರಘು ಕಡಿದಾಳು, ಕುಮಾರ ಬಕ್ಕಿ, ಹೆಡೆದಾಳು ಅಭಿಜಿತ್, ಗಣೇಶ್ ಇತರರಿದ್ದರು.
ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಜಾಗ ನೀಡಿ

ಮನೆಯಲ್ಲೇ ಮಾಡಿ ಟೇಸ್ಟಿ ಚಿಲ್ಲಿ ಚೀಸ್ ನೂಡಲ್ಸ್; ಇಲ್ಲಿದೆ ಸಿಂಪಲ್ ವಿಧಾನ | Recipe
ಫ್ಯಾಮಿಲಿ ಜತೆ ಹೋಟೆಲ್ಗೆ ಹೋದರೆ ಫ್ರೈಡ್ರೈಸ್, ನೂಡಲ್ಸ್, ಗೋಬಿ ಹೀಗೆ ಚೈನೀಸ್ ಫುಡ್ ಮೊದಲ ಆಯ್ಕೆಯಾಗಿರುತ್ತದೆ.…
ಈ ಕಾಯಿಲೆಯಿಂದ ಬಳಲುತ್ತಿರುವವರು ತಪ್ಪಾಗಿಯೂ ಬೀಟ್ರೂಟ್ ಸೇವಿಸಬೇಡಿ; ನಿಮಗಾಗಿ ಹೆಲ್ತಿ ಟಿಪ್ಸ್ | Health Tips
ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ತರಕಾರಿಯಾಗಿದೆ. ಇದು ಜೀವಸತ್ವಗಳು, ಖನಿಜಾಂಶಗಳು ಮತ್ತು ಉತ್ಕರ್ಷಣ…
ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips
ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಂಡು ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟುವುದು ಅತ್ಯಂತ ಜನಪ್ರಿಯ ವಿಧಾನವಾಗಿದೆ. ಪ್ರಪಂಚದಾದ್ಯಂತ ಅಂದಾಜು 250…