More

    ಅಂಬೇಡ್ಕರ್ ಅಧ್ಯಯನ ಸಂಸ್ಥೆಗೆ ಜಾಗ ಕೊಡಿ

    ಚಿಕ್ಕಮಗಳೂರು: ಎಸ್‌ಸಿ, ಎಸ್‌ಟಿ ಸಮುದಾಯದ ಉಪಯೋಗಕ್ಕಾಗಿ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಹೆಸರಿಗೆ ಮಂಜೂರು ಮಾಡಿಕೊಡುವಂತೆ ಕೇಳಿಕೊಂಡಿದ್ದ ಜಮೀನನ್ನು ಅನ್ಯರಿಗೆ ಖಾತೆ ಮಾಡಿಕೊಡಲು ಯತ್ನಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಎಎಪಿ ಸದಸ್ಯರು ತಾಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
    ಗವನಹಳ್ಳಿ ಸರ್ವೇ ನಂ.93ರಲ್ಲಿ ಖಾಲಿ ಇರುವ ಸರ್ಕಾರಿ ಜಮೀನನ್ನು ದಲಿತ ಸಮುದಾಯದ ಬಳಕೆಗೆ ಮಂಜೂರು ಮಾಡುವಂತೆ ತಾಲೂಕು ಆಡಳಿತಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಬಗ್ಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು ಈ ಜಮೀನಿನ ಪಕ್ಕದಲ್ಲಿ ಇರುವ ಹಿಡುವಳಿ ಜಮೀನಿಗೆ ಪಹಣಿ ಬದಲಾವಣೆ ಮಾಡಿಕೊಂಡು ಇನ್ನೊಬ್ಬರಿಗೆ ಖಾತೆ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
    ತಹಸೀಲ್ದಾರ್ ಡಾ. ಸುಮಂತ್ ಮಾತನಾಡಿ, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಜತೆಗೆ ಉದ್ದೇಶಿತ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಜಮೀನು ಮಂಜೂರು ಮಾಡಿಕೊಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
    ದಲಿತ ಮುಖಂಡರಾದ ಮರ್ಲೆ ಅಣ್ಣಯ್ಯ. ಹುಣಸೆಮಕ್ಕಿ ಲಕ್ಷ್ಮಣ್, ಮಂಜುನಾಥ ನಂಬಿಯಾರ್, ಸಂವಿಧಾನ ರಕ್ಷಣಾ ವೇದಿಕೆಯ ಕೃಷ್ಣಮೂರ್ತಿ, ಎಎಪಿ ಪ್ರಮುಖರಾದ ಅನಿಲ್ ನಾಚಪ್ಪ, ಲಿಂಗಾರಾಧ್ಯ, ಡಾ. ಸುಂದರ ಗೌಡ, ಎಂ.ಪಿ.ಈರೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts