More

    ರೈತರಿಗೆ ಸೂಕ್ತ ಪರಿಹಾರ ನೀಡಿ

    ವಿಜಯಪುರ: ತಿಕೋಟಾ ತಾಲೂಕಿನ ರೈತರ ವಿವಿಧ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ತಹಸೀಲ್ದಾರ ಸುರೇಶ ಮುಂಜೆ ಅವರಿಗೆ ಗುರುವಾರ ಮನವಿ ಸಲ್ಲಿಸಿ, ಸಮಸ್ಯೆಗಳಿಗೆ ತ್ವರಿತವಾಗಿ ಇತಿಶ್ರೀ ಹೇಳಬೇಕು. ಇಲ್ಲದಿದ್ದರೆ ತಾಲೂಕು ತಹಸೀಲ್ದಾರ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಸಲ್ಲಿಸಿ ಮಾತನಾಡಿ, ತಾಲೂಕಿನಲ್ಲಿ ಮುಂಗಾರು, ಹಿಂಗಾರು ಮಳೆಗಳೆರಡೂ ಸಂಪೂರ್ಣ ಕೈಕೊಟ್ಟ ಹಿನ್ನೆಲೆ ನಷ್ಟಗೊಂಡ ರೈತರಿಗೆ ವಿಪತ್ತು ನಿರ್ವಹಣಾ ಕಾನೂನಿನಡಿ ಪ್ರತಿ ಹೆಕ್ಟರ್​ಗೆ ರಾಜ್ಯದಿಂದ 2000 ರೂ.ಗಳು ಮತ್ತು ಕೇಂದ್ರ ಸರ್ಕಾರದಿಂದ 8500 ರೂ. ಗಳನ್ನು ಪರಿಹಾರವಾಗಿ ನೀಡಬೇಕು.

    ಆದರೆ ಕೇಂದ್ರ ಸರ್ಕಾರ ನೀಡಿದ ಪರಿಹಾರದಲ್ಲಿಯೇ 2000 ರೂ. ಕಡಿತ ಮಾಡಿರುವುದು ಖಂಡನೀಯ. ಅದನ್ನು ಕೂಡಲೇ ರಾಜ್ಯ ಸರ್ಕಾರ 2000 ರೂ. ಮತ್ತು ಕೇಂದ್ರದ 8500 ರೂ. ಸೇರಿಸಿ ಒಟ್ಟು 10,500 ರೂ. ಗಳನ್ನು ರೈತರಿಗೆ ನೀಡುವಂತೆ ಒತ್ತಾಯಿಸಿದರು.

    ಅಲ್ಲದೆ, ಬರಗಾಲ ಪರಿಹಾರ ಸಮೀೆಯನ್ನು ಹೊರಗುತ್ತಿಗೆ ನೀಡಿ ಕೈತೊಳೆದುಕೊಂಡಿದ್ದಾರೆ, ಆದರೆ ನಿಜವಾಗಿ ತಾಲೂಕಿನ ಎಲ್ಲ ನಷ್ಟವಾದ ರೈತರಿಗೆ ಪರಿಹಾರ ಒದಗಿಸಿ ಅದನ್ನು ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ ಸಮಸ್ಯೆ ಕೂಡಲೇ ಬಗೆಹರಿಸಿ ಎಲ್ಲ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

    ತಾಲೂಕು ಅಧ್ಯಕ್ಷ ಸಾತಲಿಂಗಯ್ಯ ಸಾಲಿಮಠ ಮಾತನಾಡಿ, ರಾಜ್ಯದಲ್ಲಿ ಮುಂಗಾರು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ ಹಾಗೂ ಕೃಷಿ ಪರಿಕರಗಳನ್ನು ಅವಶ್ಯಕತೆಗೆ ಅನುಗುಣವಾಗಿ ಸಮಯಕ್ಕೆ ಸಂಗ್ರಹಿಸಿಟ್ಟುಕೊಳ್ಳಬೇಕು.

    ಮಾರುಕಟ್ಟೆಯಲ್ಲಿ ಅತೀ ಹೆಚ್ಚಿನ ಬೆಲೆಗೆ ಬಿತ್ತನೆ, ಬೀಜ, ಗೊಬ್ಬರ, ಕೀಟನಾಶಕ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ತಾಲೂಕು ಉಪಾಧ್ಯಕ್ಷ ಶಾನುರ ನಂದರಗಿ, ಹೊನವಾಡ ಗ್ರಾಮ ಅಧ್ಯಕ್ಷ ಹಣಮಂತ ಬ್ಯಾಡಗಿ ರೈತರ ಇನ್ನಿತರ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಆಗ್ರಹಿಸಿದರು.

    ಗೌರವಾಧ್ಯಕ್ಷ ಗಿರೀಶ ಕುಲಕರ್ಣಿ, ಮಹಿಳಾ ಟಕದ ಅಧ್ಯಕ್ಷೆ ಸಂಗೀತಾ ರಾಠೋಡ, ಜಿಲ್ಲಾ ಸಂಚಾಲಕ ನಜೀರ ನಂದರಗಿ, ಮಹಾದೇವ ಕದಮ, ಮಹಿಬೂಬ ಬಾಷಾ ಮನಗೂಳಿ, ಖಾದರ ವಾಲಿಕಾರ, ಮಲ್ಲಿಕಾರ್ಜುನ ಗುಗ್ಗರಿ, ಕಾಶಿನಾಥ ದೇವನಾಯಕ, ಸಿದ್ದಪ್ಪ ಕೊಟ್ಟಲಗಿ, ಸುಧಾಕರ ನಲವಡೆ, ಆಮೀನಸಾಬ ತಿಕೋಟಿ, ವಿಲಾಸ ಮಾನವರ, ಅರ್ಜುನ ಸಾಳುಂಕೆ, ಉಮೇಶ ಕದಮ, ಗಂಗಾರಾಮ ಪವಾರ, ಶ್ರೀಕಾಂತ ಪವಾರ, ಸಿದ್ದರಾಯ ಗಗನಮಾಲಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts