ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿ

ಹಾನಗಲ್ಲ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು.

ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ವಿುಸಿ ರಸ್ತೆ ತಡೆ ನಡೆಸಿದರು. ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವಂತೆ ಹಲವು ವರ್ಷದಿಂದ ಬೇಡಿಕೆಯಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಆದರೆ, ಪ್ರಸ್ತುತ ಸಮ್ಮಿಶ್ರ ಸರ್ಕಾರ ಉಚಿತ ಬಸ್ ಪಾಸ್ ವಿತರಣೆ ರದ್ದುಗೊಳಿಸುವ ಮೂಲಕ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಿತ್ಯ ಬಸ್ ಮೂಲಕವೇ ಪಟ್ಟಣಗಳಿಗೆ ಸಂಚರಿಸಿ ಶಿಕ್ಷಣ ಪಡೆಯಬೇಕಾದ ಅಗತ್ಯವಿದೆ. ಕೂಡಲೇ ರಾಜ್ಯ ಸರ್ಕಾರ ಶಿಕ್ಷಣ ವಿರೋಧಿ ಆದೇಶ ರದ್ದುಪಡಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಯಲ್ಲಿ ಎಬಿವಿಪಿ ತಾಲೂಕು ಸಂಚಾಲಕ ಮಲ್ಲಪ್ಪ ನಾಗರವಳ್ಳಿ, ಕಾರ್ಯದರ್ಶಿ ಬಸವರಾಜ ಕಟ್ಟಿಮನಿ, ಭರತ ಹುಳ್ಳಿಕಾಶಿ, ಭರತ್​ಕುಮಾರ, ರಿತೇಶ ತಳವಾರ, ಮೇಘರಾಜ ರಾಥೋಡ, ಮಾಲತೇಶ ಮಾಳಿ, ವಿಜಯ ಜಾಡರ, ಅರುಣಕುಮಾರ ರ್ಬಾ, ಶಂಭು ಮಲ್ಲಿಗ್ಗಾರ, ಎಚ್. ಮಾಲು, ಎಸ್.ಕೆ. ವೀರೇಶ, ಸಚಿನ್ ವಾಲಿಕಾರ ಇತರರು ಇದ್ದರು.

Leave a Reply

Your email address will not be published. Required fields are marked *