More

    ವೆಸ್ಟ್​ಇಂಡೀಸ್​ ವಿರುದ್ಧ ಶತಕ; ಹಿಟ್​ಮ್ಯಾನ್​ ದಾಖಲೆ ಸರಿಗಟ್ಟಿದ ಗ್ಲೆನ್​ ಮ್ಯಾಕ್ಸ್​ವೆಲ್

    ಅಡಿಲೇಡ್​: ಇಲ್ಲಿನ ಅಡಿಲೇಡ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಪ್ರವಾಸಿ ವೆಸ್ಟ್​ ಇಂಡೀಸ್​ ನಡುವಣ ಎರಡನೇ ಟಿ-20 ಪಂದ್ಯದಲ್ಲಿ ಅತಿಥೇಯ ತಂಡದ ಪರ ಭರ್ಜರಿ ಶತಕ ಸಿಡಿಸುವ ಮೂಲಕ ಗ್ಲೆನ್​ ಮ್ಯಾಕ್ಸ್​ವೆಲ್​ ಹೊಸ ದಾಖಲೆ ಒಂದನ್ನು ಬರೆದಿದ್ದಾರೆ.

    ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಆಸ್ಟ್ರೇಲಿಯಾ ತಂಡವು ಗ್ಲೆನ್​ ಮ್ಯಾಕ್ಸ್​ವೆಲ್ (120 ರನ್, 55 ಎಸೆತ, 12 ಬೌಂಡರಿ, 8 ಸಿಕ್ಸರ್​) ಶತಕದ ಫಲವಾಗಿ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 241 ರನ್​ ಗಳಿಸಿತ್ತು. ತಂಡದ ಪರ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಮ್ಯಾಕ್ಸ್​ವೆಲ್​ ಟಿ-20 ಕ್ರಿಕೆಟ್​ನಲ್ಲಿ ಹೊಸ ದಾಖಲೆಗಳನ್ನು ಬರೆದಿದ್ದಾರೆ.

    55 ಎಸೆತಗಳಲ್ಲಿ 120 ರನ್​ ಗಳಿಸಿದ ಮ್ಯಾಕ್ಸ್​ವೆಲ್​ ಟಿ-20 ಮಾದರಿಯಲ್ಲಿ ತಮ್ಮ ಐದನೇ ಶತಕವನ್ನು ಪೂರೈಸಿಕೊಂಡರು. ಈ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದರೊಂದಿಗೆ ಮ್ಯಾಕ್ಸ್‌ವೆಲ್ ಈ ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಆಟಗಾರರ ಪೈಕಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯ ರೋಹಿತ್​ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

    ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆ: ನಿತಿನ್​ ಗಡ್ಕರಿ

    ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಅಂತರಾಷ್ಟ್ರೀಯ ಟಿ20 ಪಂದ್ಯದಲ್ಲಿ ಐದನೇ ಶತಕ ಸಿಡಿಸುವ ಮೂಲಕ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ರೋಹಿತ್​ ಶರ್ಮಾ ತಮ್ಮದಾಗಿಸಿಕೊಂಡಿದ್ದರು. 94 ಇನ್ನಿಂಗ್ಸ್​ನಲ್ಲಿ ಮ್ಯಾಕ್ಸ್​ವೆಲ್​ ಈ ಸಾಧನೆ ಮಾಡಿದ್ದು, ಹಿಟ್​ಮ್ಯಾನ್​ 143 ಇನ್ನಿಂಗ್ಸ್​ ಆಡಿ ಈ ಸಾಧನೆಯನ್ನು ತಮ್ಮದಾಗಿಸಿಕೊಂಡಿದ್ದರು.

    ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ

    ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಮಾಡಿದ ಆಸ್ಟ್ರೇಲಿಯಾ ತಂಡವು ಗ್ಲೆನ್​ ಮ್ಯಾಕ್ಸ್​ವೆಲ್ (120 ರನ್, 55 ಎಸೆತ, 12 ಬೌಂಡರಿ, 8 ಸಿಕ್ಸರ್​) ಶತಕದ ಫಲವಾಗಿ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 241 ರನ್​ ಗಳಿಸಿತ್ತು. ಬೃಹತ್​ ಗುರಿ ಬೆನ್ನತ್ತಿದ್ದ ವೆಸ್ಟ್​ ಇಂಡೀಸ್​ ತಂಡವು ರೋಮನ್​ ಪೋವಲ್​ (63 ರನ್, 36ಎಸೆತ, 5 ಬೌಂಡರಿ, 4 ಸಿಕ್ಸರ್​) ಅರ್ಧಶತಕದ ಫಲವಾಗಿ 20 ಓವರ್​ಗಳಲ್ಲಿ 207 ರನ್​ಗಳಿಸಿ ಸೋಲಪ್ಪಿಕೊಂಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts