ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಶ್ರೀ ಅಮೃತೇಶ್ವರ ಪದವಿ ಪೂರ್ವ ಕಾಲೇಜ್‌ನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಲೆಕ್ಕಪರಿಶೋಧಕರ ಕೋರ್ಸ್ ಬಗ್ಗೆ ಇತ್ತೀಚೆಗೆ ತಿಳಿವಳಿಕೆ ನೀಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಹುಬ್ಬಳ್ಳಿ ಸಿಎ ಸಂಸ್ಥೆಯ ಅಧ್ಯಕ್ಷ ಧನಪಾಲ್ ಮುನ್ನೊಳ್ಳಿ ಅತಿಥಿಗಳಾಗಿ ಮಾತನಾಡಿ, ಸಿಎ ಅಂತಿಮ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳಿವೆ. ರಾಷ್ಟ್ರಮಟ್ಟದಲ್ಲಿ ಆಗುತ್ತಿರುವ ಬದಲಾವಣೆ ಆಧರಿಸಿ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.
ಹಿರಿಯ ಲೆಕ್ಕ ಪುರುಶೋಧಕ ವೈ.ಎಂ. ಖಟಾವಕರ ಮಾತನಾಡಿ, ಸಿಎ ಪರೀಕ್ಷೆಗಳಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಜಾಗತಿಕ ಮನ್ನಣೆ ದೊರೆಯುತ್ತಿದೆ ಎಂದರು.
ಕಾಲೇಜ್ ಪ್ರಾಚಾರ್ಯೆ ಎಂ.ಆರ್. ಮುಂಡರಗಿ ಅಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕ ಡಾ.ಎಚ್.ಬಿ. ಪೂಜಾರವರು ಪ್ರಾಸ್ತವಿಕವಾಗಿ ಮಾತನಾಡಿದರು.
ಉಪನ್ಯಾಸಕ ಎ.ಬಿ. ಬೆಟಸೂರ ವಂದಿಸಿದರು.
ಸಿಎ ವಿದ್ಯಾರ್ಥಿಗಳಿಗೆ ಜಾಗತಿಕ ಮನ್ನಣೆ
ಭಾರತದ ನೋಟಿನಲ್ಲಿರುವ ಮಹಾತ್ಮ ಗಾಂಧಿಜಿ ಅವರ ಫೋಟೋ ಕ್ಲಿಕ್ಕಿಸಿದ್ದು ಯಾವಾಗ & ಎಲ್ಲಿ?; ಇಲ್ಲಿದೆ ಸಂಪೂರ್ಣ ಮಾಹಿತಿ | Information
ಭಾರತದ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಫೋಟೋವನ್ನು ನೀವು ನೋಡಿರಬಹುದು. ಆದರೆ ನೋಟಿನ ಮೇಲೆ ನಗುತ್ತಿರುವ…
ಇಬ್ಬನಿಯಿಂದ ಚಳಿಗಾಲದಲ್ಲಿ ತುಳಸಿ ಗಿಡ ಹಾಳಾಗುತ್ತಿದೆಯೇ?; ಆರೈಕೆಗಾಗಿ ಇಲ್ಲಿದೆ ಸಿಂಪಲ್ ಟ್ರಿಕ್ | Health Tips
ತುಳಸಿಯು ಔಷಧೀಯ ಸಸ್ಯವಾಗಿರುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನೂ ಹೊಂದಿದೆ. ಈ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ…
ಬಿಪಿ ಹೆಚ್ಚಾಗಲು ಈ ಆಹಾರ ಪದಾರ್ಥಗಳು ಕಾರಣವೇ; ತಜ್ಞರು ಹೇಳಿದ್ದೇನು? | Health Tips
ನೂಡಲ್ಸ್, ಪಾಪಡ್, ಉಪ್ಪಿನಕಾಯಿ, ಸಾಸ್ ಮತ್ತು ನಮ್ಕೀನ್ ಬಹುತೇಕ ಈ ಎಲ್ಲಾ ಆಹಾರ ಪದಾರ್ಥಗಳು ಪ್ರತಿಯೊಬ್ಬರ…