More

    ಸರ್ಕಾರಿ ಶಾಲೆಗಳಿಗೆ ಕತ್ತಲೆ ಭಾಗ್ಯ: ಉಚಿತ ಪೂರೈಕೆ ಆದೇಶವಿದ್ದರೂ ಬಿಲ್ ಪಾವತಿಗೆ ಒತ್ತಡ

    | ವಿಲಾಸ ಮೇಲಗಿರಿ ಬೆಂಗಳೂರು

    ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಬರೆ ಎಳೆದಿರುವ ನಡುವೆಯೇ, ಸರ್ಕಾರಿ ಶಾಲೆಗಳಲ್ಲಿ ಸದ್ದಿಲ್ಲದೆ ಕತ್ತಲೆ ಭಾಗ್ಯ ಜಾರಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸುವಂತೆ ಸರ್ಕಾರದಿಂದ ಸ್ಪಷ್ಟ ಆದೇಶವಿದ್ದರೂ ಇಂಧನ ಇಲಾಖೆ ಹಳೆಯ ಬಾಕಿ ಹಣ ಪಾವತಿಸುವಂತೆ ಮುಖ್ಯ ಶಿಕ್ಷಕರಿಗೆ ಶಾಕ್ ಕೊಟ್ಟಿದೆ. ಹಲವೆಡೆ ಬಿಲ್ ಪಾವತಿಸದ ಶಾಲೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

    ಸರ್ಕಾರ ಗೃಹ ಜ್ಯೋತಿ ಯೋಜನೆ ಜಾರಿಗೆ ತಂದ ಬಳಿಕ ಶಿಕ್ಷಕರ ಸಂಘಟನೆಗಳು ಶಾಲೆ, ಕಾಲೇಜುಗಳಿಗೂ ಉಚಿತ ವಿದ್ಯುತ್, ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ 2023ರ ನ.1 ರಂದು ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರು ಒದಗಿಸುವುದಾಗಿ ಘೊಷಿಸಿದ್ದರು. ಬಳಿಕ 2023ರ ಡಿ.15ರಂದು ಈ ಕುರಿತು ಅದೇಶ ಹೊರಬಿದ್ದಿತ್ತು.

    ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸುವುದರಿಂದ ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿ ಹೆಚ್ಚಿಸಬಹುದಾಗಿದೆ. ಹಾಗಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬಾಕಿಯಿರುವ ವಿದ್ಯುತ್ ಮತ್ತು ನೀರಿನ ಬಿಲ್ಲುಗಳ ಪಾವತಿಗೆ ವಿನಾಯಿತಿ ನೀಡುವಂತೆ ಹಾಗೂ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಪ್ರಸ್ತಾವನೆಯಲ್ಲಿ ಸಿದ್ಧಪಡಿಸಿತ್ತು.

    ಶಿಕ್ಷಣ ಇಲಾಖೆ ಪ್ರಸ್ತಾವನೆ: ಸಿಎಂ ಘೊಷಣೆ ಹಾಗೂ ಆಯುಕ್ತರ ಪತ್ರ ಆಧರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನಕ್ಕೆ ಒಳಪಡುವ ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸಲು ಆರ್ಥಿಕ ಇಲಾಖೆ ಸಹಮತಿ ನೀಡಿತ್ತು. ಬಳಿಕ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸಲು 2023-24ನೇ ಆರ್ಥಿಕ ಸಾಲಿನ ಅಂತ್ಯದವರೆಗೆ ಬಳಕೆ ಮಾಡಲಾದ/ಮಾಡಲಾಗುವ ವಿದ್ಯುತ್ ಮತ್ತು ನೀರಿನ ಶುಲ್ಕ ಪಾವತಿಗಾಗಿ ಅಗತ್ಯವಿರುವ ಜಿಲ್ಲಾವಾರು ಅನುದಾನದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪಿಯು ನಿರ್ದೇಶಕರನ್ನು ಕೋರಲಾಗಿತ್ತು. ಅದರಂತೆ ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು.

    See also  ಕಂಪನಿಯ ಪ್ರವರ್ತಕರಿಂದಲೇ 2 ಲಕ್ಷ ಷೇರುಗಳ ಖರೀದಿ: ರೂ. 1047 ಕೋಟಿ ಮೌಲ್ಯದ ಆರ್ಡರ್‌; ಸ್ಟಾಕ್​ಗೆ ಬೇಡಿಕೆ

    ಸರ್ಕಾರಿ ಶಾಲೆಗಳಿಗೆ ಕತ್ತಲೆ ಭಾಗ್ಯ: ಉಚಿತ ಪೂರೈಕೆ ಆದೇಶವಿದ್ದರೂ ಬಿಲ್ ಪಾವತಿಗೆ ಒತ್ತಡ

    ಪೂರ್ವಾನ್ವಯ ಜಾರಿಗೆ ಆಗ್ರಹ: ಮುಖ್ಯಮಂತ್ರಿ ಸಿದ್ದರಾಮಯ್ಯ 2023 ನ.1ರಂದು ಇಂದಿನಿಂದಲೇ ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರು ಒದಗಿಸುವುದಾಗಿ ಹೇಳಿದ್ದರು. ಹಾಗಾಗಿ ಅಂದಿನಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ಜಾರಿಗೊಳಿಸಬೇಕು. ಬಾಕಿ ವಸೂಲಿಯನ್ನು ಕೈಬಿಡಬೇಕು ಎಂಬುದು ಶಿಕ್ಷಕರ ಸಂಘಟನೆಗಳ ಆಗ್ರಹವಾಗಿದೆ.

    29 ಕೋಟಿ ರೂ. ಬಿಡುಗಡೆ: ಜೂ.20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಹಾಗೂ ನೀರಿನ ಸೌಲಭ್ಯ ಒದಗಿಸುವ ಕಾರ್ಯಕ್ರಮಕ್ಕೆ 29 ಕೋಟಿ ರೂ. ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

    ಸರ್ಕಾರಿ ಆದೇಶ ಉಲ್ಲಂಘನೆ : 2024-25ನೇ ಸಾಲಿನಿಂದ ನಿರಂತರವಾಗಿ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರು ಸರಬರಾಜು ಮಾಡಬೇಕು. ವಾರ್ಷಿಕವಾಗಿ ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಇಂಧನ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳು ನೇರವಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಿ ಅಗತ್ಯವಿರುವ ಅನುದಾನವನ್ನು ಪಡೆಯಲು ಸೂಕ್ತ ಕ್ರಮ ಕೈಗೊಳ್ಳತಕ್ಕದ್ದು ಎಂದು ಆದೇಶದಲ್ಲಿ ಸ್ಪಷ್ಟ ನಿರ್ದೇಶನ ನೀಡಲಾಗಿತ್ತು. ಆದರೆ, ಸರ್ಕಾರದ ಆದೇಶವನ್ನೇ ಉಲ್ಲಂಘಿಸಿರುವ ಇಂಧನ ಇಲಾಖೆ, ಶಾಲೆ, ಪಿಯು ಕಾಲೇಜುಗಳಿಗೆ ಬಿಲ್ ನೀಡಿ ಹಣ ಪಾವತಿಗೆ ಒತ್ತಡ ಹೇರಿದೆ.

    ಸಂಪರ್ಕ ಸ್ಥಗಿತ: ಕೆಲವೆಡೆ ಶಾಲೆ, ಕಾಲೇಜುಗಳು ಬಾಕಿ ವಿದ್ಯುತ್ ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಲಾಗಿದೆ. ಮತ್ತೆ ಕೆಲವೆಡೆ ಸಂಪರ್ಕ ಕಡಿತಗೊಳಿಸುವುದಾಗಿ ಬೆದರಿಸಿ ಬಿಲ್ ಪಾವತಿಸಿಕೊಳ್ಳಲಾಗಿದೆ.

    ಸರ್ಕಾರದ ವಾದ : ಶಾಲೆ, ಪಿಯು ಕಾಲೇಜುಗಳಿಂದ ವಿದ್ಯುತ್ ಬಿಲ್ ವಸೂಲು ಮಾಡದಂತೆ ಈಗಾಗಲೇ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಕಂಪನಿಗಳು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್ ವಸೂಲು ಮಾಡಬಾರದು. ಈ ಬಗ್ಗೆ ಇಲಾಖೆಯಿಂದ ಇನ್ನೊಂದು ಸುತ್ತೋಲೆ ಹೊರಡಿಸುತ್ತೇವೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    See also  ಶೌಚಗೃಹ ಕೆಲಸ ಅರ್ಧಂಬರ್ಧ - ಖಾಸಗಿ ಬಸ್ ನಿಲ್ದಾಣ ಸೌಲಭ್ಯ ವಂಚಿತ - ಪ್ರಯಾಣಿಕರಿಗೆ ನಿರಂತರ ಸಮಸ್ಯೆ

    ಸರ್ಕಾರ 2023ರ ನ.1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಆದೇಶ ಮಾಡಬೇಕು. ಶಾಲೆ, ಪಿಯು ಕಾಲೇಜು ಮುಖ್ಯಸ್ಥರ ಮೇಲೆ ಒತ್ತಡ ಹೇರಬಾರದು. ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಬೆದರಿಕೆ ಒಡ್ಡಬಾರದು. ಸರ್ಕಾರದ ಆದೇಶದಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಪಡೆದುಕೊಳ್ಳಬೇಕು.

    | ಕೆ.ನಾಗೇಶ, ಚಂದ್ರಶೇಖರ ನುಗ್ಗಲಿ, ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

    ಲೋಕಸಭೆ ಚುನಾವಣೆ: ಉತ್ತರ ಪ್ರದೇಶವನ್ನು ಲಘುವಾಗಿ ಪರಿಗಣಿಸಿದ್ದೇ ತಪ್ಪಾಯಿತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts