More

    ಕಾಂಗ್ರೆಸ್​ನಿಂದ ಸಾಮಾಜಿಕ ಜಾಲತಾಣದಲ್ಲಿ ಗೋಬ್ಯಾಕ್​ ಅಮಿತ್​ ಷಾ ಅಭಿಯಾನ

    ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್​ ಷಾ ವಿರುದ್ಧ ಕಾಂಗ್ರೆಸ್​ ಸಾಮಾಜಿಕ ಜಾಲತಾಣಗಳಲ್ಲಿ ಗೋ ಬ್ಯಾಕ್​ ಅಭಿಯಾನ ಆರಂಭಿಸಿದೆ.

    ಕಾಂಗ್ರೆಸ್​ ಮುಖಂಡರು ಹಾಗೂ ಕಾರ್ಯಕರ್ತರು ಹಿಟ್ಲರ್​ ಅಮಿತ್​ ಷಾ ಗೋಬ್ಯಾಕ್​ ಎಂದು ಕನ್ನಡ ಹಾಗೂ ಇಂಗ್ಲಿಷ್​ನಲ್ಲಿ ಪೋಸ್ಟ್​ ಮಾಡಿ ಅಭಿಯಾನ ನಡೆಸುತ್ತಿದ್ದಾರೆ.

    ಕಾರ್ಯಕರ್ತರು ಪೋಸ್ಟ್​ಗಳನ್ನು ಫೇಸ್​ಬುಕ್​, ಟ್ವೀಟರ್​ ಸೇರಿದಂತೆ ಇತರ ಜಾಲತಾಣಗಳಲ್ಲಿ ಹಂಚಿಕೆ ಮಾಡುತ್ತಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಆಗಮಿಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್​ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮಹಾದಾಯ ವಿಚಾರ ಹಾಗೂ ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಮಾತನಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಪ್ಪು ಬಲೂನ್​ ಚಳವಳಿ: ಕಾಯ್ದೆ ಬಗ್ಗೆ ಸಚಿವರು ಮಾತನಾಡುವುದು ಬೇಡ, ಸಮಸ್ಯೆಗಳ ಬಗ್ಗೆ ಮಾತನಾಡಲಿ ಎಂದು ಕೆಲವರು ಕಪ್ಪುಬಣ್ಣದ ಬಲೂನ್​ಗಳಿಗೆ ಗಾಳಿ ತುಂಬಿ ಆಕಾಶಕ್ಕೆ ಹಾರಿಬಿಟ್ಟು ಚಳವಳಿ ನಡೆಸುತ್ತಿದ್ದಾರೆ.

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts