ಮನೆಮನೆಗೆ ತೆರಳಿ ಯೋಜನೆಗಳ ಅರಿವು ಮೂಡಿಸಿ

Hadagali mla
ಹೂವಿನಹಡಗಲಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಕೃಷ್ಣನಾಯ್ಕ ಉದ್ಘಾಟಿಸಿದರು. ಕೇಂದ್ರ ಸಂವಹನ ಇಲಾಖೆಯ ಕರ್ನಾಟಕ ವಲಯದ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ.ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ ಎಸ್., ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಇತರರಿದ್ದರು.
Published on

ಹೂವಿನಹಡಗಲಿ: ಮಹಿಳೆಯರು ಹಾಗೂ ನಿರುದ್ಯೋಗಿಗಳಿಗೆ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಪಂಚಮಸಾಲಿ ಸಮುದಾಯ ಭವನದಲ್ಲಿ ಕೇಂದ್ರ ಸಂವಹನ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಇಲಾಖೆಯಿಂದ ಮಂಗಳವಾರ ಏರ್ಪಡಿಸಿದ್ದ ಪೋಷಣ ಅಭಿಯಾನ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಜನರ ಸರ್ವತೋಮುಖ ಅಭಿವೃದ್ಧಿ ಗುರಿಯಾಗಿಸಿಕೊಂಡಿರುವ ಕೇಂದ್ರ ಸರ್ಕಾರ ಪಿಎಂ ಆವಾಸ್ ಯೋಜನೆಯಡಿ ನಿವೇಶನ ಹೊಂದಿದವರಿಗೆ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸಬೇಕು ಎಂದರು.

ದೂರು ನೀಡಲು ಠಾಣೆಗೆ ಬರುವ ಜನರ ಸಮಸ್ಯೆಗಳಿಗೆ ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಆನ್‌ಲೈನ್ ಮೂಲಕ ದೂರು ನೀಡುವ ಪ್ರಕ್ರಿಯೆಯನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಗ್ರಾಪಂಗಳಿಗೆ ಲಕ್ಷಾಂತರ ರೂ. ಅನುದಾನ ನೀಡುತ್ತಿದೆ. ಅನೇಕ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ಹಿತವನ್ನು ಕಾಪಾಡುತ್ತಿದೆ ಎಂದರು.

ವಾರ್ತಾ ಶಾಖೆ ಹಾಗೂ ಕೇಂದ್ರ ಸಂವಹನ ಇಲಾಖೆಯ ಕರ್ನಾಟಕ ವಲಯದ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ.ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ ಎಸ್. ಮಾತನಾಡಿದರು. ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ, ಟಿಎಚ್‌ಒ ಡಾ.ಸ್ವಪ್ನಾಕಟ್ಟಿ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಪೂಜಪ್ಪ, ಮಂಡಲ ಅಧ್ಯಕ್ಷ ಹಣ್ಣಿ ಶಶಿಧರ್, ಜಿಪಂ ಮಾಜಿ ಅಧ್ಯಕ್ಷ ತೋಟಾನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net