More

    ದೇವಸ್ಥಾನಗಳ ಸಂಪತ್ತು ರಕ್ಷಣೆಗೆ ಕಾಯ್ದೆ, ದೇಶಾದ್ಯತ ಗೋಹತ್ಯೆ ನಿಷೇಧ, ಕೇಂದ್ರಕ್ಕೆ ಪೇಜಾವರ ಶ್ರೀ ಆಗ್ರಹ

    ಉಡುಪಿ: ಹಲವು ರಾಜ್ಯಗಳಲ್ಲಿ ದೇವಸ್ಥಾನಗಳ ಸಂಪತ್ತು ಅನ್ಯಮತೀಯರ ಪಾಲಾಗುತ್ತಿದ್ದು, ಹಿಂದು ಸಮಾಜದ ಅಭಿವೃದ್ಧಿಗೆ ತೊಡಕಾಗಿದೆ. ಈ ಸಂಪತ್ತು ರಕ್ಷಣೆಗೆ ಕೇಂದ್ರ ಸರ್ಕಾರ ಕಾಯ್ದೆ ರೂಪಿಸಬೇಕು. ದೇಶಾದ್ಯಂತ ಗೋ ಹತ್ಯೆ ನಿಷೇಧಕ್ಕೆ ಮುಂದಾಗಬೇಕು.

    ರಾಮಮಂದಿರ ನಿರ್ಮಾಣ ಕಾರ್ಯ ಶೀಘ್ರ ನಡೆಯುವಂತೆ ಸಹಕಾರ ನೀಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಮಂಗಳವಾರ ದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಷಿ ಅವರನ್ನು ಭೇಟಿಯಾದ ಸಂದರ್ಭ ಈ ವಿಷಯವನ್ನು ಗಮನಕ್ಕೆ ತಂದರು. ಈ ಬಗ್ಗೆ ಕಾನೂನು ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

    ಸಚಿವರು ಶ್ರೀಗಳನ್ನು ಸ್ವಾಗತಿಸಿ ಗೌರವಿಸಿದರು. ಶ್ರೀಗಳು ಸಚಿವರಿಗೆ ಶಾಲು, ಫಲ, ಶ್ರೀಕೃಷ್ಣ ಪ್ರಸಾದ, ಮಂತ್ರಾಕ್ಷತೆ ನೀಡಿ ಅಭಿನಂದಿಸಿದರು. ವಾಸುದೇವ ಭಟ್ ಪೆರಂಪಳ್ಳಿ, ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯ, ಅನಂತ ಜಿ.ಎ, ಕೃಷ್ಣ ಭಟ್, ಮಠದ ದೆಹಲಿ ಶಾಖೆಯ ವ್ಯವಸ್ಥಾಪಕ ದೇವಿಪ್ರಸಾದ್ ಭಟ್ ಉಪಸ್ಥಿತರಿದ್ದರು.

    ಸಂಸತ್ತಿಗೆ ಮಹಾಭಾರತ ಕೊಡುಗೆ: ನೂರು ವರ್ಷಗಳ ನಂತರ ದೇಶದಲ್ಲಿ ಪ್ರಕಟವಾಗಿರುವ ಮಹಾಭಾರತ ಕೃತಿಯ ಪರಿಷ್ಕೃತ (ಸಂಸ್ಕೃತದ 24 ಸಂಪುಟ) ಆವೃತ್ತಿಯನ್ನು ಸಂಸತ್ತಿನ ಗ್ರಂಥಾಲಯದಲ್ಲಿರಿಸಲು ಶ್ರೀಗಳು ಸಚಿವ ಪ್ರಲ್ಹಾದ ಜೋಷಿ ಅವರಿಗೆ ಹಸ್ತಾಂತರಿಸಿದರು. ಪಲಿಮಾರು ಮಠದ ಪರ್ಯಾಯ ಅವಧಿಯಲ್ಲಿ ತತ್ವ ಸಂಶೋಧನ ಸಂಸತ್ ವತಿಯಿಂದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಪ್ರಕಟಗೊಂಡಿದ್ದ ಕನ್ನಡ ಮತ್ತು ಸಂಸ್ಕೃತ ಭಾಷೆಯ ಶುದ್ಧಪಾಠದ ಸಂಪುಟಗಳನ್ನು ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts