ಜನರ ಬಳಿಗೆ ತೆರಳಿ ಸಮಸ್ಯೆ ತಿಳಿದುಕೊಳ್ಳಿ

pdb (1)
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಸಂಕಲ್ಪ, ಸಮರ್ಪಣೆ, ಸಂಘರ್ಷವನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಮೈಗೂಡಿಸಿಕೊಂಡು ಜನರ ಬಳಿ ತೆರಳಿ ಜನಸಾಮಾನ್ಯರ ಸಮಸ್ಯೆಯನ್ನು ಅರಿತುಕೊಂಡು ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.

ಕಾಪು ರಾಜೀವ್ ಭವನದಲ್ಲಿ ಮಂಗಳವಾರ ನಡೆದ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ)ಯ ನೂತನ ಸಮಿತಿ ಅಧ್ಯಕ್ಷ ವೈ.ಸುಕುಮಾರ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಂಗ್ರೆಸ್ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ಸಂವಿಧಾನದ ಆಶಯಗಳನ್ನು ದುರ್ಬಲಗೊಳಿಸುವ ಕೆಲಸ ಕಾರ್ಯಗಳು ಬಿಜೆಪಿಯಿಂದ ನಡೆಯುತ್ತಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಆಗಬೇಕಾಗಿದೆ. ಈ ಮೂಲಕ ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಸಿದ್ಧರಾಗಿ. ಕಾಪುವಿನಲ್ಲಿ ಪಕ್ಷವು ಬಲಿಷ್ಠಗೊಳ್ಳಲು ಕಾರ್ಯಕರ್ತರ ಸಹಕಾರ ಮಹತ್ವದ್ದಾಗಿದೆ ಎಂದರು.

ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನೂತನ ಅಧ್ಯಕ್ಷ ವೈ.ಸುಕುಮಾರ್ ಮಾತನಾಡಿದರು.

ಮಾಜಿ ಅಧ್ಯಕ್ಷರಾದ ನವೀನ್‌ಚಂದ್ರ ಸುವರ್ಣ, ನವೀನ್‌ಚಂದ್ರ ಜೆ.ಶೆಟ್ಟಿ, ಶಾಂತಲತಾ ಶೆಟ್ಟಿ, ಕಾಪು ದಿವಾಕರ್ ಶೆಟ್ಟಿ, ಬೆಳ್ಳೆ ಶಿವಾಜಿ ಎಸ್.ಸುವರ್ಣ, ಶರ್ಫುದ್ಧೀನ್, ವಿಶ್ವಾಸ್ ಅಮೀನ್, ಪ್ರಶಾಂತ್ ಜತ್ತನ್ನ, ರಮೇಶ್ ಕಾಂಚನ್, ರಾಜೇಶ್ ರಾವ್ ಪಾಂಗಾಳ, ಮುಹಮ್ಮದ್ ನಿಯಾಝ್, ಗಂಗಾಧರ ಸುವರ್ಣ, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಕಿಣಿ, ಹಸನಬ್ಬ ಶೇಖ್ ಶಿರ್ವ ಉಪಸ್ಥಿತರಿದ್ದರು. ಅಮೀರ್ ಮೊಹಮ್ಮದ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net