ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ನವದೆಹಲಿ: ಪ್ಯಾಂಕ್ರಿಯಾಟಿಕ್​ ಕ್ಯಾನ್ಸರ್​ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಿಕ್ಕರ್​ ಅವರ ದೇಹದಲ್ಲಿ ಆಂತರಿಕ ರಕ್ತಸ್ರಾವ ಉಂಟಾಗುತ್ತಿರುವ ಸಾಧ್ಯತೆ ಇದ್ದು ಈ ಬಗ್ಗೆ ಸಂಪೂರ್ಣ ಪರೀಕ್ಷೆ ಮಾಡಬೇಕಾಗಿದೆ ಎಂದು ರಾಜ್ಯಸರ್ಕಾರ ನಡೆಸುತ್ತಿರುವ ಗೋವಾ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಅಧಿಕಾರಿ ತಿಳಿಸಿದ್ದಾರೆ.

ಫೆ.2018ರಲ್ಲಿ ಮನೋಹರ್​ ಅವರಿಗೆ ಕ್ಯಾನ್ಸರ್​ ಇರುವುದು ಪತ್ತೆಯಾಗಿತ್ತು. ನ್ಯೂಯಾರ್ಕ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರದ ದಿನಗಳಲ್ಲಿ ದೆಹಲಿ, ಮುಂಬೈ, ಗೋವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಕಳೆದ ವಾರ ಕೂಡ ಅವರ ಆರೋಗ್ಯದಲ್ಲಿ ಏರುಪೇರಾಗಿ, ರಕ್ತ ವಾಂತಿ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು.