Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಗೋವಾ ಸಿಎಂ ಮನೋಹರ್ ಪರಿಕ್ಕರ್‌ಗೆ ಸೌಜನ್ಯ ಇಲ್ಲ: ಸಿದ್ದರಾಮಯ್ಯ

Friday, 29.12.2017, 1:59 PM       No Comments

ಚಿಕ್ಕಬಳ್ಳಾಪುರ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್​ಗೆ ಸೌಜನ್ಯ ಇಲ್ಲ. ಗೋವಾ ಕಾಂಗ್ರೆಸ್ ಮುಖಂಡರನ್ನು ಪರಿಕ್ಕರ್ ಮನವೊಲಿಸಲಿ. ಆಯಾ ರಾಜ್ಯದ ಜನರನ್ನು ಸಮಾಧಾನಪಡಿಸುವುದು ಆಯಾ ಸಿಎಂಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮಾತನಾಡಿದ ಅವರು, ಜನರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಮಹದಾಯಿ ನೀರು ಹಂಚಿಕೆ ಸಬಂಧ ಕರ್ನಾಟಕದ ಪತ್ರಕ್ಕೆ ಗೋವಾ ಸರ್ಕಾರ ಸ್ಪಂದಿಸಿಲ್ಲ. ಗೋವಾದ ಸಿಎಂ ಆಗಿ ಪರಿಕ್ಕರ್ ಯಡಿಯೂರಪ್ಪಗೆ ಪತ್ರ ಬರೆದಿದ್ದು ಸರೀನಾ? ಹೆತ್ತವರಿಗೆ ಹೆಗ್ಗಣ ಮುದ್ದು, ಪರಿಕ್ಕರ್ಗೆ ಬಿಜೆಪಿಯವನ್ನು ಕಂಡರೆ ಮುದ್ದು. ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎನ್ನುವುದನ್ನು ಗೋವಾ ಸಿಎಂ ತಿಳಿದುಕೊಳ್ಳಲಿ ಎಂದು ಸಿಎಂ ಕಿಡಿಕಾರಿದರು.

ನಾನು ಲಾಯರ್, ಜಗದೀಶ್ ಶೆಟ್ಟರ್ ಗೆ ಕಾನೂನು ಗೊತ್ತಿಲ್ಲ. ಒಂದು ರಾಜ್ಯದ ಮುಖ್ಯಮಂತ್ರಿ ಮತ್ತೊಂದು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೀಬೇಕು. ಗೋವಾ ಸಿಎಂ ಗೆ ಪತ್ರ ಬರೆಯಲು ಯಡಿಯೂರಪ್ಪ ಯಾರು ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿಗೆ ಹೊಟ್ಟೆ ಕಿಚ್ಚು. ಅದಕ್ಕೆ ಅವರು ಎತ್ತಿನಹೊಳೆ ಯೋಜನೆ ಸ್ಥಗಿತ ಮಾಡುವುದಾಗಿ ಹೇಳಿದ್ದಾರೆ. ಎತ್ತಿನಹೊಳೆ ಪ್ರಾರಂಭವಾಗಿ ಎರಡು ವರ್ಷ ಕಳೆದಿದ್ದು, ಅದಕ್ಕಾಗಿ 25 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ತಜ್ಞರ ಅಭಿಪ್ರಾಯದಂತೆ ಯೋಜನೆ ಸರಿಯಾಗಿಯೇ ಇದೆ ಎಂದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top