ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರ ಬಂಧನ

ಬೆಳಗಾವಿ: ಜಿಲ್ಲೆಯ ಗಡಿ ಭಾಗದ ಪ್ರದೇಶಗಳಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಶುಕ್ರವಾರ ಅಬಕಾರಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ 75 ಬಾಕ್ಸ್ ಮದ್ಯ ವಶಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯ ಮೂಲದ ಉಸ್ಮಾನಬಾದ್ ಜಿಲ್ಲೆಯ ಬಸಪ್ಪ ಕೋಳಿ ಹಾಗೂ ರಮೇಶ ಕಾಂಬಳೆ ಬಂಧಿತರು. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಕುರಿತು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೊಂದಿಕೊಂಡಿರುವ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಮದ್ಯ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಗೋವಾದ ರಾಜ್ಯಕ್ಕೆ ಸೇರಿದ ಮದ್ಯವನ್ನು ಜಿಲ್ಲೆಯ ಮಾರ್ಗವಾಗಿ ವಿವಿಧ ಕಡೆ ಅಕ್ರಮವಾಗಿ ಸಾಗಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿ 75 ಬಾಕ್ಸ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ ವಾಹನ, ಇನ್ನಿತರರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಮಂಜುನಾಥ ತಿಳಿಸಿದ್ದಾರೆ.

ಅಬಕಾರಿ ಎಇಸಿ ಅರುಣಕುಮಾರ ನೇತೃತ್ವದಲ್ಲಿ ಡಿವೈಎಸ್‌ಪಿ ವಿಜಯಕುಮಾರ ಹಿರೇಮಠ, ರವಿ ಹೊಸಳ್ಳಿ, ಸಿದ್ದಪ್ಪ ಮೇಟಿ, ಮಹಾದೇವ ಕೆ, ಸೇರಿದಂತೆ ಇನ್ನಿತರರ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.