More

    ಗೊಬ್ಬರಬೆಟ್ಟು ನಿವಾಸಿ ಅಕ್ಷಯ್ ಕೆಲಸಕ್ಕೆಂದು ಹೋದಾತ ನಾಪತ್ತೆ

    ಕೋಟ: ಕೋಟತಟ್ಟು ಗ್ರಾಪಂ ವ್ಯಾಪ್ತಿಯ ಗೊಬ್ಬರಬೆಟ್ಟು ನಿವಾಸಿ ಅಕ್ಷಯ್(32) ಮಂಗಳವಾರದಿಂದ ನಾಪತ್ತೆಯಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಕೋಟದ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸದಲ್ಲಿದ್ದ ಅಕ್ಷಯ್ ಮಂಗಳವಾರ ಬೆಳಗ್ಗೆ 11ಕ್ಕೆ ಮನೆಯಿಂದ ಹೋದವರು ಮಧ್ಯಾಹ್ನ 1ಕ್ಕೆ ಅವರ ಪತ್ನಿಗೆ ಕೋಟದಲ್ಲಿ ಕಾಣಸಿಕ್ಕಿದ್ದರು. ಸ್ವಲ್ಪ ಕೆಲಸ ಇದೆ ಆಮೇಲೆ ಬರುತ್ತೇನೆ ಎಂದು ಹೇಳಿ ಹೋಗಿದ್ದರು. ಪೊಲೀಸರು ಅಕ್ಷಯ್ ಮೊಬೈಲ್ ಟವರ್ ಲೊಕೇಶನ್ ಪರಿಶೀಲಿಸಿದಾಗ ಕುಂದಾಪುರ ತಾಲೂಕಿನ ಕೊರವಡಿ ಬಳಿ ತೋರಿಸಿದ್ದು, ಹುಡುಕಾಡಿದಾಗ ಪೊದೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಮಾಹಿತಿಯಿದ್ದಲ್ಲಿ 9686184490 ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts