More

    ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದ ಶ್ರೀರಾಮುಲು!

    ಚಿತ್ರದುರ್ಗ: ಮುಂದಿನ ಎರಡು ತಿಂಗಳಲ್ಲಿ ಕರೊನಾ ಸೋಂಕು ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನ ಇಲ್ಲ. ಇನ್ನು ನಮ್ಮನ್ನು ದೇವರೇ ಕಾಪಾಡಬೇಕು, ಇಲ್ಲವೇ ಜನರೇ ಜಾಗೃತರಾಗಬೇಕು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

    ಕರೊನಾ ನಿರ್ವಹಣೆಯ ವಿಚಾರದಲ್ಲಿ ಸಚಿವರು ನಿರ್ಲಕ್ಷ್ಯ ತಾಳಿದ್ದಾರೆ ಎಂಬ ವಾದದಲ್ಲಿ ಹುರುಳಿಲ್ಲ. ನಾವು ನಮ್ಮ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇವೆ. ಆದರೆ ಸೋಂಕಿನ ನಿಯಂತ್ರಣ ಯಾರ ಕೈಲಿದೆ ಹೇಳಿ?! ಎಂದು ಸುದ್ದಿಗಾರರನ್ನು ಪ್ರಶ್ನಿಸಿದರು. ಇದನ್ನೂ ಓದಿ: ಕ್ಯಾನ್​​ನಲ್ಲಿ ಇಂಧನ ನೀಡಲು ನಿರಾಕರಿಸಿದ್ದಕ್ಕೆ ಆತ ಏನು ಮಾಡಿದ? 

    ಇಂತಹ ಸಂದಿಗ್ಧ ಸಮಯದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಅವರಲ್ಲಿ ನನ್ನ ಮನವಿ ಇಷ್ಟೇ. ಅವರು ಕರೊನಾ ವಿಷಯದಲ್ಲಿ ಸರ್ಕಾರದ ವಿರುದ್ಧ ಮಾತಾಡುವ ವೇಳೆ ಎಲ್ಲವನ್ನೂ ಬಿಗಿ ಹಿಡಿದು ಮಾತಾಡಬೇಕು. ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು. ನಾವು ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲು ಸಿದ್ಧರಿದ್ದೇವೆ ಎಂದರು.

    ಖಾಸಗಿ ಆಸ್ಪತ್ರೆಗಳಲ್ಲಿ ಲೋಪಗಳಾಗಿರುವುದು ಕಂಡುಬಂದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಕೇವಲ ಒಂದೆರಡು ಆಸ್ಪತ್ರೆಗಳು ಮಾಡುವ ನಿರ್ಲಕ್ಷೃದಿಂದಾಗಿ ಇಡೀ ಆರೋಗ್ಯ ವ್ಯವಸ್ಥೆಗೆ ಕೆಟ್ಟ ಹೆಸರು ಬರುತ್ತಿದೆ. ಸದ್ಯದಲ್ಲೇ ತಪ್ಪಿತಸ್ಥ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

    ‘ಕೊವಿಡ್​-19 ಲಸಿಕೆಯನ್ನು ದೇಶದ ಮೂಲೆಮೂಲೆಗೂ ತಲುಪಿಸುವ ಜವಾಬ್ದಾರಿ ರಿಲಯನ್ಸ್​ ಸಂಸ್ಥೆಯದ್ದು…’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts